ಬಲೂಚಿಸ್ತಾನ: ಕಂದಕಕ್ಕೆ ಉರುಳಿಬಿದ್ದ ಬಸ್'ಗೆ ಹೊತ್ತಿಕೊಂಡ ಬೆಂಕಿ, 40 ಮಂದಿ ದುರ್ಮರಣ ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 40 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಕರಾಚಿ: ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 40 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ಬಸ್ ಕ್ವೆಟ್ಟಾದಿಂದ ಕರಾಚಿಗೆ ತೆರಳುತ್ತಿತ್ತು, ಸುಮಾರು 48 ಮಂದಿ ಪ್ರಯಾಣಿಕರು ಬಸ್ ನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವೇಗವಾಗಿ ಚಲಿಸುತ್ತಿದ್ದ ಬಸ್ ಲಾಸ್ಬೆಲಾ ಬಳಿ ಯು-ಟರ್ನ್ ತೆಗೆದುಕೊಳ್ಳುವಾಗ ಸೇತುವೆಯ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವಾಹನ ಕಂದಕಕ್ಕೆ ಉರುಳಿ ಬಿದ್ದಿದ್ದು, ಕೂಡಲೇ ಬಸ್'ಗೆ ಬೆಂಕಿ ಹೊತ್ತುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಪೆರುವಿನಲ್ಲಿ ಭೀಕರ ರಸ್ತೆ ಅಪಘಾತ: ಬಂಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಬಸ್, 24 ಮಂದಿ ದುರ್ಮರಣಘಟನೆಯಲ್ಲಿ ಮಗು ಹಾಗೂ ಮಹಿಳೆ ಸೇರಿದಂತೆ ಮೂವರನ್ನು ಬದುಕುಳಿದಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಮೃತರ ಸಂಖ್ಯೆ ಹೆಚ್ಚಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.