ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ಮುಂಜಾನೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸದ್ಯ ಅಪಾಯದಿಂದ ಅವರು ಪಾರಾಗಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ. ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ಮುಂಜಾನೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸದ್ಯ ಅಪಾಯದಿಂದ ಅವರು ಪಾರಾಗಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ.ಝೆಲೆನ್‌ಸ್ಕಿ ಅವರು ಯುದ್ಧಭೂಮಿಯಾದ ಖಾರ್ಕಿವ್ ಪ್ರದೇಶಕ್ಕೆ ತೆರಳಿ, ಅಲ್ಲಿಂದ ಕೀವ್ ನಗರಕ್ಕೆ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಷ್ಯಾ ಸೇನೆಯಿಂದ ಪುನಃ ವಶಪಡಿಸಿಕೊಂಡ ನಗರವಾದ ಇಜಿಯಂನಲ್ಲಿ ಸೇನೆಯನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದರು.ಉಕ್ರೇನ್ ರಾಜಧಾನಿಯಲ್ಲಿ ಅಧ್ಯಕ್ಷರ ವಾಹನಕ್ಕೆ ಮತ್ತೊಂದು ಪ್ರಯಾಣಿಕ ವಾಹನ ಡಿಕ್ಕಿ ಹೊಡೆದಿದೆ ಎಂದು ಅವರ ವಕ್ತಾರ ಸೆರ್ಜಿ ನಿಕಿಫೋರೊವ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.ಝೆಲೆನ್‌ಸ್ಕಿ ಅವರ ವೈದ್ಯಕೀಯ ತಂಡವು ಅಪಘಾತಕ್ಕೀಡಾದ ವಾಹನದ ಚಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಆ್ಯಂಬುಲೆನ್ಸ್ ಮೂಲಕ ಕರೆದೊಯ್ಯಲಾಯಿತು ಎಂದು ಅವರು ಹೇಳಿದರು.ಅಪಘಾತದಿಂದ ಅಧ್ಯಕ್ಷರನ್ನು ವೈದ್ಯರು ಪರೀಕ್ಷಿಸಿದ್ದು, ಆದರೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ನಿಕಿಫೊರೊವ್ ತಿಳಿಸಿದ್ದಾರೆ.ಕಾರು ಅಪಘಾತದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.