ಜೇಡ ಕಚ್ಚಿ ಖ್ಯಾತ ಗಾಯಕ ಸಾವು: 28ನೇ ವಯಸ್ಸಿಗೆ ಉಸಿರು ನಿಲ್ಲಿಸಿದ ಸಿಂಗರ್! ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್ ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ. ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್ ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ.ಬ್ರೆಜಿಲಿಯನ್ ನ ಈ ಗಾಯಕನಿಗೆ ಕೇವಲ 28 ವರ್ಷ ವಯಸ್ಸಾಗಿತ್ತು. ಅತೀ ಕಡಿಮೆ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಅಭಿಮಾನಿಗಳಿಗೆ ಶಾಕ್ ಆಗಿದೆ.ಜೇಡ ಕಚ್ಚಿದ ದಿನವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಕೂಡ ಪಡೆದಿದ್ದರು. ಮನೆಗೆ ಬಂದ ಬಳಿಕ ತೀವ್ರ ಆಯಾಸದಿಂದ ಬಳಲುತ್ತಿದ್ದರು.ಇದನ್ನೂ ಓದಿ: ಇಸ್ರೇಲ್ ವೈಮಾನಿಕ ದಾಳಿ ವೇಳೆ ಹಮಾಸ್ ಉಗ್ರ ಸಂಘಟನೆಯ ಶಸ್ತ್ರಾಸ್ತ್ರ ಸಂಶೋಧನಾ ತಜ್ಞ ಸಾವು!ದಿನದಿಂದ ದಿನಕ್ಕೆ ಅವರ ದೇಹದ ಬಣ್ಣ ಕೂಡ ಬದಲಾಗುತ್ತಿದ್ದು, ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ. ಅಗಲಿದ ಗಾಯಕನಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.