ಈಜಿಪ್ಟ್ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ತೆರಳಿದ ಪ್ರಧಾನಿ ಮೋದಿ ಮೊದಲ ಬಾರಿಗೆ ಈಜಿಪ್ಟ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಈಜಿಪ್ಟ್ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ತೆರಳುತ್ತಿದ್ದಾರೆ. ಕೈರೋ: ಮೊದಲ ಬಾರಿಗೆ ಈಜಿಪ್ಟ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಈಜಿಪ್ಟ್ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ತೆರಳುತ್ತಿದ್ದಾರೆ. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರಿಗೆ ಅರಬ್ ದೇಶದ ಅತ್ಯುನ್ನತ ಗೌರವ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಇದನ್ನು ಓದಿ: ದ್ವಿಪಕ್ಷೀಯ ಮಾತುಕತೆ, ಹಲವು ಒಪ್ಪಂದಗಳು: ಈಜಿಪ್ಟ್ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ"ನನ್ನ ಈಜಿಪ್ಟ್ ಭೇಟಿಯು ಐತಿಹಾಸಿಕವಾಗಿದೆ. ಇದು ಭಾರತ-ಈಜಿಪ್ಟ್ ಸಂಬಂಧಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ ಮತ್ತು ನಮ್ಮ ರಾಷ್ಟ್ರಗಳ ಜನರಿಗೆ ಪ್ರಯೋಜನವಾಗಲಿದೆ. ನಾನು ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ಸರ್ಕಾರ ಮತ್ತು ಈಜಿಪ್ಟ್ ಜನರಿಗೆ ಧನ್ಯವಾದ ಹೇಳುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.ಇದನ್ನು ಓದಿ: ಪ್ರಧಾನಿ ಮೋದಿಗೆ ಈಜಿಪ್ಟ್ ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಈಜಿಪ್ಟ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. 1997ರ ನಂತರ ಭಾರತದ ಪ್ರಧಾನಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ.