ನೇಪಾಳದಲ್ಲಿ ನದಿಗೆ ಉರುಳು ಬಿದ್ದ ಬಸ್: 6 ಮಂದಿ ಭಾರತೀಯರು ಸೇರಿ 7 ಜನರ ಸಾವು, 19 ಜನರಿಗೆ ಗಾಯ ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಭಾರತೀಯರು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಕಠ್ಮಂಡು: ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಭಾರತೀಯರು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 6 ಮಂದಿ ಭಾರತೀಯ ಯತ್ರಾರ್ಥಿಗಳು ಸೇರಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಗಾಯಗೊಂಡ 19ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಕಠ್ಮಂಡುವಿನಿಂದ ಬೇನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಬಿಹಾರ: ನೇಪಾಳ ಮೂಲಕ ಭಾರತದೊಳಗೆ ನುಸುಳಿದ ಇಬ್ಬರು ಚೀನಿ ಪ್ರಜೆಗಳ ಬಂಧನಕಠ್ಮಂಡುವಿನಿಂದ ರಮಣೀಯ ನಗರವಾದ ಪೊಖರಾಗೆ ತೆರಳುತ್ತಿದ್ದ ಬಸ್ಸು ಪ್ರಾಂತದ ಧಾಡಿಂಗ್ ಜಿಲ್ಲೆಯ ಚಾಲೀಸ್‌ನಲ್ಲಿ ತ್ರಿಶೂಲಿ ನದಿಗೆ ಬಿದ್ದಾಗ ಈ ಅಪಘಾತ ಸಂಭವಿಸಿದೆ.ಅಪಘಾತದ ನಂತರ ಬಸ್ ತ್ರಿಶೂಲಿ ನದಿಯಲ್ಲಿ ಭಾಗಶಃ ಮುಳುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಗಾರಿನಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚಾಗಿತ್ತು ಎಂದು ವರದಿಗಳು ತಿಳಿಸಿವೆ.