: ತಿರುಮಲದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ತಲೆ ಮೇಲೆ ಬಿದ್ದ ಮರ, ಮಹಿಳೆ ಆಸ್ಪತ್ರೆಗೆ ದಾಖಲು! ತಿರುಮಲ ಕ್ಷೇತ್ರದ ಜಪಾಲಿ ಆಂಜನೇಯಸ್ವಾಮಿ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ದೇವರ ದರ್ಶನಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಇದ್ದಕ್ಕಿದ್ದಂತೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ತಿರುಪತಿ: ಖ್ಯಾತ ಪವಿತ್ರ ಯಾತ್ರಾ ತಾಣ ತಿರುಮಲದಲ್ಲಿ ಆಂಜನೇಯಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಮರ ಬಿದ್ದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಆಂಧ್ರಪ್ರದೇಶದ ತಿರುಮಲ () ಕ್ಷೇತ್ರದ ಜಪಾಲಿ ಆಂಜನೇಯಸ್ವಾಮಿ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ದೇವರ ದರ್ಶನಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಇದ್ದಕ್ಕಿದ್ದಂತೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.ಹಿಂಬದಿಯಲ್ಲಿ ಪ್ರಕೃತಿ ಸೌಂದರ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿಯುತ್ತಿದ್ದಾಗ ಈ ದೃಶ್ಯವೂ ದಾಖಲಾಗಿದೆ. ಕೂಡಲೇ ವ್ಯಕ್ತಿ ಮೊಬೈಲ್ ಬಂದ್ ಮಾಡಿ ಮಹಿಳೆ ಕಡೆ ಓಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ( ) ಆಗಿದೆ.ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶರವಣನ್ ಎಂಬವರು ಹಂಚಿಕೊಂಡಿರುವ ವಿಡಿಯೋದಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಮಹಿಳೆಯ ತಲೆಯ ಮೇಲೆ ಬೃಹತ್ ಗಾತ್ರದ ಮರದ ಕೊಂಬೆಯೊಂದು ಬಿದ್ದು ಕೂಡಲೇ ಮಹಿಳೆ ಪ್ರಜ್ಞೆ ತಪ್ಪಿ ನೆಲಕ್ಕುರುಳುತ್ತಿರುವುದನ್ನು ಕಾಣಬಹುದು. . ,' # # # # ../v0kksio4NAವರದಿಗಳ ಪ್ರಕಾರ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಪ್ರಸ್ತುತ ತಲೆ ಮತ್ತು ಬೆನ್ನುಮೂಳೆಯ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.