3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಗೆ ಶುಭ ಕೋರಿದ ಪಾಕ್ ಪ್ರಧಾನಿ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಕೊನೆಗೂ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸೋಮವಾರ ಶುಭಾಶಯ ಕೋರಿದ್ದಾರೆ. ನವದೆಹಲಿ: ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಕೊನೆಗೂ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸೋಮವಾರ ಶುಭಾಶಯ ಕೋರಿದ್ದಾರೆ. ತಮ್ಮನ್ನು ಅಭಿನಂದಿಸಿದ ಪಾಕ್ ಪ್ರಧಾನಿಗೆ ಮೋದಿ ಧನ್ಯವಾದ ಅರ್ಪಿಸಿದ್ದಾರೆ.ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಸುಮಾರು 100 ದೇಶಗಳ ನಾಯಕರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಗೆಲುವಿಗೆ ಮೋದಿಯವರನ್ನು ಅಭಿನಂದಿಸಿದ್ದಾರೆ."ಇಂದು ನಿಮ್ಮ ಶುಭ ಹಾರೈಕೆಗಳಿಗಾಗಿ ಶೆಹಬಾಜ್ ಷರೀಫ್ ಅವರಿಗೆ ಧನ್ಯವಾದಗಳು" ಎಂದು ನಲ್ಲಿ ಷರೀಫ್ ಅವರ ಸಂದೇಶಕ್ಕೆ ಪ್ರತ್ಯುತ್ತರವಾಗಿ ಮೋದಿ ಪೋಸ್ಟ್ ಹಾಕಿದ್ದಾರೆ.ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಷರೀಫ್, "ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಭಾರತದ ನೆರೆಹೊರೆ ದೇಶಗಳ ಮತ್ತು ಹಿಂದೂ ಮಹಾಸಾಗರ ಪ್ರದೇಶದ ಏಳು ನಾಯಕರು ಭಾಗವಹಿಸಿದ್ದರು.