ಮಧ್ಯ ಪ್ರದೇಶ: ಅವಿಭಕ್ತ ಕುಟುಂಬದ 8 ಮಂದಿಯನ್ನು ಕೊಂದು ವ್ಯಕ್ತಿ ತಾನೂ ನೇಣಿಗೆ ಶರಣು! ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ. ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ಬೊಡಲ್ ಕಚ್ಚರ್‌ ಎನ್ನುವ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅವಿಭಕ್ತ ಕುಟುಂಬವೊಂದರಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಮಹುಲ್‌ಜಿರಿ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾನಸಿಕ ಅಸ್ವಸ್ಥತೆ ಹೊಂದಿರುವ ಈ ವ್ಯಕ್ತಿಯು ತನ್ನ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಚಿಂದ್ವಾರಾದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ ಹೇಳಿದ್ದಾರೆ.