ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರ ದುರ್ಮರಣ, 20 ಮಂದಿಗೆ ಗಾಯ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದಾತಿಯಾ: ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ವ್ಯಕ್ತಿಗಳು ರತನ್‌ಗಢ ಮಾತಾ ದೇಗುಲಕ್ಕೆ ತೆರಳುತ್ತಿದ್ದಾಗ ಮೈಥಾನ ಪಾಲಿ ಬಳಿ ಬೆಳಿಗ್ಗೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಅಪಘಾತಕ್ಕೀಡಾದ ವಾಹನವು ರಸ್ತೆಯಿಂದ 15 ಅಡಿ ಎತ್ತರದ ಮೋರಿಗೆ ಉರುಳಿಬಿದ್ದಿದ್ದು, ಪರಿಣಾಮ ಇಬ್ಬರು ಬಾಲಕಿಯರು ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆಂದು ಅಧಿಕಾರಿ ತಿಳಿಸಿದ್ದಾರೆ.ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.