ಉತ್ತರ ಪ್ರದೇಶ: - ರೈಲು ಹಳಿ ತಪ್ಪಿ ಅಪಘಾತ; 4 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ ಮೋತಿಗಂಜ್‌– ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ 15904 ಸಂಖ್ಯೆಯ ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿದ್ದು, ಈ ವೇಳೆ ರೈಲಿನ ಹಲವು ಬೋಗಿಗಗಳಿಗೆ ಹಾನಿಯಾಗಿದೆ. ಗೊಂಡಾ: ಉತ್ತರ ಪ್ರದೇಶದ ಗೊಂಡಾ ಬಳಿಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್‌ ಪ್ರಯಾಣಿಕ ರೈಲಿನ ಹಲವು ಬೋಗಿಗಳು ಗುರುವಾರ ಹಳಿತಪ್ಪಿದ್ದು, ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಮೋತಿಗಂಜ್‌– ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ 15904 ಸಂಖ್ಯೆಯ ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿದ್ದು, ಈ ವೇಳೆ ರೈಲಿನ ಹಲವು ಬೋಗಿಗಗಳಿಗೆ ಹಾನಿಯಾಗಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಯಾಣಿಕರನ್ನು ರಕ್ಷಿಸುವ ಕಾರ್ಯಚರಣೆ ಮುಂದುವರಿದಿದೆ.ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು. ಈ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ.ರಕ್ಷಣಾ ಕಾರ್ಯಾಚರಣೆಗೆ ಸಿಎಂ ಯೋಗಿ ಆದಿತ್ಯಾನಾಥ್ ಸೂಚನೆಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಿಎಂ ಯೋಗಿ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಸಹಾಯವಾಣಿ ತೆರೆದ ರೈಲ್ವೇ ಇಲಾಖೆರೈಲ್ವೆ ವೈದ್ಯಕೀಯ ಕ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ಈಶಾನ್ಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. 15904 , . ../pe3CECrnmfಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.