' ದೊಡ್ಡ ಹಗರಣ'; ಜಂಟಿ ಸಂಸದೀಯ ಸಮಿತಿ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ ಷೇರುಪೇಟೆಯ ವಾಸ್ತವಿಕ ಬೆಲೆಗಿಂತ ಕೃತಕ ಬೆಲೆಯಲ್ಲಿ ಅದಾನಿ ಸಮೂಹದ ಷೇರುಗಳು ಮಾರಾಟವಾಗುತ್ತಿವೆ ಎಂದು 2023ರ ಜನವರಿಯಲ್ಲಿ ಹಿಂಡೆನ್‌ಬರ್ಗ್‌ ವರದಿ ಪ್ರಕಟಿಸಿತ್ತು. ನವದೆಹಲಿ: ಅದಾನಿ ಷೇರು ಹಗರಣದ ಕುರಿತು ಹಿಂಡನ್ ಬರ್ಗ್ ವರದಿ ( ) ವೈರಲ್ ಆದ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( ) ಜಂಟಿ ಸಂಸದೀಯ ಸಮಿತಿ ತನಿಖೆ ( )ಗೆ ಒತ್ತಾಯಿಸಿದ್ದಾರೆ.ಅದಾನಿ ಷೇರು ಹಗರಣದಲ್ಲಿ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್‌ ಮತ್ತು ಅವರ ಪತಿ ಭಾಗಿಯಾಗಿದ್ದಾರೆ ಎಂದು ಅಮೆರಿಕದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡೆನ್‌ಬರ್ಗ್ ಮಾಡಿರುವ ಆರೋಪದ ಬಗ್ಗೆ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆ ಮಾಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.ಇದೊಂದು ಬೃಹತ್ ಹಗರಣ ಎಂದು ಅಭಿಪ್ರಾಯಪಟ್ಟಿರುವ ಅವರು, ಈ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಯುವವರೆಗೂ ಪ್ರಧಾನಿ ಮೋದಿಯವರು ತಮ್ಮ ಮಿತ್ರನನ್ನು ರಕ್ಷಿಸುವುದನ್ನು ಮುಂದುವರಿಸುತ್ತಾರೆ. ಏಳು ದಶಕಗಳಿಂದ ಶ್ರಮವಹಿಸಿ ಮಿರ್ಮಿಸಿರುವ ಭಾರತದ ಸಂವಿಧಾನಿಕ ಸಂಸ್ಥೆಗಳೊಂದಿಗೆ ಅವರು ರಾಜಿ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿದ್ದಾರೆ.ಅದಾನಿ ಸಮೂಹದ ಬಗ್ಗೆ ತನಿಖೆಗೆ ಇರುವ ಹಿತಾಸಕ್ತಿ ಸಂಘರ್ಷವನ್ನು ತಡೆಯಬೇಕು ಎಂದು ಆಗ್ರಹಿಸಿರುವ ಅವರು, ಈ ಬಗ್ಗೆ ತನಿಖೆಗೆ ಜಂಟಿ ಸಂಸದೀಯ ರಚಿಸಬೇಕು. 2023ರ ಜನವರಿಯಲ್ಲಿ ಹಿಂಡನ್‌ಬರ್ಗ್ ಮಾಡಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಮಿತ್ರನನ್ನು ಸುಪ್ರೀಂ ಕೋರ್ಟ್‌ನಲ್ಲಿ ಸೆಬಿ ಕ್ಲಿನ್ ಚಿಟ್ ನೀಡಿತ್ತು. ಆದರೆ ಹೊಸ ಆರೋಪದಲ್ಲಿ ಸೆಬಿಯ ಮುಖ್ಯಸ್ಥರೇ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.ಮಧ್ಯಮ ವರ್ಗದ ಸಣ್ಣ ಹೂಡಿಕೆದಾರರು ಕಷ್ಟ ಪಟ್ಟು ದುಡಿದು ಷೇರು ಮಾರುಕಟ್ಟೆಯಲ್ಲಿ ಹಾಕಿದ ಹಣವನ್ನು ರಕ್ಷಿಸಬೇಕಾಗಿದೆ. ಆವರು ಸೆಬಿಯನ್ನೇ ನಂಬಿಕೊಂಡಿದ್ದಾರೆ’ ಎಂದು ಅವರು ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿದ್ದಾರೆ.ಹಿಂಡನ್ ಬರ್ಗ್ ವರದಿಯಲ್ಲೇನಿತ್ತು?ಉದ್ಯಮಿ ಗೌತಮ್‌ ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಮಾಧವಿ ಮತ್ತು ಅವರ ಪತಿ ಪಾಲುದಾರಿಕೆ ಹೊಂದಿದ್ದಾರೆ. ಅದಾನಿಯವರು ಮಾರಿಷಸ್‌ ಮತ್ತು ಇನ್ನಿತರ ದೇಶಗಳಲ್ಲಿ ಹೊಂದಿರುವ ‘ಶೆಲ್‌ ಕಂಪನಿ’ಗಳ ಬಗ್ಗೆ ತನಿಖೆ ನಡೆಸಲು ಸೆಬಿ ಯಾವುದೇ ಆಸಕ್ತಿ ತೋರದಿರುವುದು ಅಚ್ಚರಿ ಮೂಡಿಸಿದೆ ಎಂದು ಹಿಂಡೆನ್‌ಬರ್ಗ್‌ ತನ್ನ ಬ್ಲಾಗ್‌ಸ್ಪಾಟ್‌ನಲ್ಲಿ ಶನಿವಾರ ಆರೋಪ ಮಾಡಿತ್ತು. ಮಾಧವಿ ದಂಪತಿ ಹೂಡಿಕೆಯ ಮೂಲ ತಮ್ಮ ವೇತನವೆಂದು ನಿಧಿಯ ದೃಢೀಕೃತ ಘೋಷಣೆಯಲ್ಲಿ ಹೇಳಿಕೊಂಡಿದ್ದಾರೆ. ಈ ದಂಪತಿಯ ಹೂಡಿಕೆಯ ನಿವ್ವಳ ಮೌಲ್ಯವು ₹84 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಅದು ಹೇಳಿತ್ತು. , , 2023 . , -- . & …ಕೃತಕ ಬೆಲೆಯಲ್ಲಿ ಷೇರು ಮಾರಾಟಷೇರುಪೇಟೆಯ ವಾಸ್ತವಿಕ ಬೆಲೆಗಿಂತ ಕೃತಕ ಬೆಲೆಯಲ್ಲಿ ಅದಾನಿ ಸಮೂಹದ ಷೇರುಗಳು ಮಾರಾಟವಾಗುತ್ತಿವೆ ಎಂದು 2023ರ ಜನವರಿಯಲ್ಲಿ ಹಿಂಡೆನ್‌ಬರ್ಗ್‌ ವರದಿ ಪ್ರಕಟಿಸಿತ್ತು. ಅದಾನಿ ಸಮೂಹದ ಕಂಪನಿಗಳ ಕುರಿತು ಹಿಂಡನ್‌ಬರ್ಗ್‌ ರಿಸರ್ಚ್‌ ಸಂಸ್ಥೆಯು ವರದಿ ಪ್ರಕಟಿಸಿದ ಬೆನ್ನಲ್ಲೇ, ಸಮೂಹದ ಷೇರುಗಳ ಬೆಲೆಗಳಲ್ಲಿ ಭಾರಿ ಕುಸಿತ ಉಂಟಾಗಿತ್ತು.ಹಿಂಡೆನ್‌ಬರ್ಗ್ ವರದಿಯ ಆರೋಪ ನಿರಾಕರಿಸಿದ ಸೆಬಿ ಅಧ್ಯಕ್ಷೆಅಮೆರಿಕದ ಶಾರ್ಟ್‌ ಶೆಲ್ಲರ್‌ ಕಂಪನಿ ಹಿಂಡೆನ್‌ಬರ್ಗ್ ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್‌ ಮತ್ತು ಅವರ ಪತಿ ಧವಲ್‌ ಬುಚ್‌ ಶನಿವಾರ ಅಲ್ಲಗಳೆದಿದ್ದಾರೆ. ಹಿಂಡೆನ್‌ಬರ್ಗ್‌ ಆರೋಪಗಳು ಆಧಾರರಹಿತವಾಗಿವೆ ಎಂದಿರುವ ದಂಪತಿ, ತಮ್ಮ ಹಣಕಾಸು ವ್ಯವಹಾರಗಳು ತೆರೆದ ಪುಸ್ತಕವಿದ್ದಂತೆ ಎಂದು ಪ್ರತಿಪಾದಿಸಿದ್ದಾರೆ.