ತಡರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ವಿಡಿಯೋ ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯದಿಂದ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗುರುದಾಸ್‌ಪುರ: ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯದಿಂದ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬಟಾಲದ ವಿತ್ವಾನ್ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ಎರಡೂ ಗುಂಪಿನಲ್ಲಿ ಒಟ್ಟು 13 ಜನರಿದ್ದರು. 60 ಬಾರಿ ಗುಂಡಿನ ದಾಳಿ ನಡೆದಿದ್ದು ಆ ಪೈಕಿ ನಾಲ್ವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಗುಂಡಿನ ದಾಳಿಯಲ್ಲಿ ಎರಡೂ ಗುಂಪಿನ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. | 4 ' : ://./0fPkZ69wlT : (: ) ../5yoUxmwc4Y