: ಸಾಮಾನ್ಯ ಸ್ಥಿತಿಗೆ ಮರಳಿದ ವೈಮಾನಿಕ ವ್ಯವಸ್ಥೆ- ಸರ್ಕಾರ ಶನಿವಾರ ಬೆಳಿಗ್ಗೆ 3 ಗಂಟೆಯಿಂದ ವಿಮಾನ ವ್ಯವಸ್ಥೆಗಳು ಸಹಜವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಯಾಣಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ನವದೆಹಲಿ: ಮೈಕ್ರೋಸಾಫ್ಟ್ ನ ತಾಂತ್ರಿಕ ಸಮಸ್ಯೆಯಿಂದಾಗಿ ಅಸ್ತವ್ಯಸ್ತಗೊಂಡಿದ್ದ ವೈಮಾನಿಕ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.ಶನಿವಾರ ಬೆಳಿಗ್ಗೆ 3 ಗಂಟೆಯಿಂದ ವಿಮಾನ ವ್ಯವಸ್ಥೆಗಳು ಸಹಜವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಯಾಣಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.ನೆನ್ನೆ (ಶುಕ್ರವಾರ) ಸಂಭವಿಸಿದ ಅವ್ಯವಸ್ಥೆಯಿಂದಾಗಿ ಕೆಲವು ಬ್ಯಾಕ್ ಲಾಗ್ ಗಳಿವೆ, ಅವುಗಳನ್ನು ಕ್ರಮೇಣ ತೆರವುಗೊಳಿಸಲಾಗುತ್ತಿದೆ, ಮಧ್ಯಾಹ್ನದ ವೇಳೆಗೆ ಎಲ್ಲಾ ಸಮಸ್ಯೆಗಳೂ ಬಗೆಹರಿಯಲಿದೆ ಎಂದು ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.ಮೈಕ್ರೋಸಾಫ್ಟ್ ನ ತಾಂತ್ರಿಕ ದೋಷದಿಂದಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 55 ವಿಮಾನಗಳು ರದ್ದುಗೊಂಡಿದ್ದವು. ಹಲವು ವಿಮಾನಗಳ ಟೇಕ್ ಆಫ್ ವಿಳಂಬವಾಗಿತ್ತು. ದೆಹಲಿ ವಿಮಾನ ನಿಲ್ದಾಣದಲ್ಲಿ, ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಕೈಬರಹದ ಬೋರ್ಡಿಂಗ್ ಪಾಸ್‌ಗಳನ್ನು ನೀಡಿತ್ತು.