ಕಾಶ್ಮೀರ: ಕಥುವಾದಲ್ಲಿ ಇಬ್ಬರು ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಪ್ರದೇಶದ ಕಥುವಾ-ಬಸಂತಗಢ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ. ಶ್ರೀನಗರ: ಜಮ್ಮು ಸಮೀಪದ ಕಥುವಾದಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್ ಸೈನಿಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ಬುಧವಾರ ತಿಳಿಸಿದೆ.ಜಮ್ಮು ಮತ್ತು ಕಾಶ್ಮೀರದ ಉಧಂಪುರ ಪ್ರದೇಶದ ಕಥುವಾ-ಬಸಂತಗಢ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ.ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಕಥುವಾದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ತೀವ್ರ ಗುಂಡಿನ ಚಕಮಕಿ ನಡೆಯಿತು ಎಂದು ಜಮ್ಮುವಿನ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.ಇನ್ನಷ್ಟು ಉಗ್ರರು ಅಡಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಹತರಾದ ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಸೇನೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.