ಜಾರ್ಖಂಡ್: ಟ್ರಕ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಸ್ನೇಹಿತರ ದುರ್ಮರಣ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಧನ್‌ಬಾದ್‌: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ನೇಹಿತರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಕಾರಿನಲ್ಲಿ ಐವರು ಸೇಹ್ನಿತರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.ಲೋಹರ್‌ಬರ್ವಾದ ಆರು ಪಥದ ರಾಷ್ಟ್ರೀಯ ಹೆದ್ದಾರಿ-2 ರಲ್ಲಿ ಕಾರು, ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಮುಖಮುಖಿಯಾಗಿ ಡಿಕ್ಕಿ ಹೊಡೆದಿದೆ.ಗಂಭೀರವಾಗಿ ಗಾಯಗೊಂಡಿದ್ದ ಓರ್ವರನ್ನು ಸಮೀಪದ ಆಸ್ಪತ್ರಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯ ನಂತರ ಟ್ರಕ್ ಚಾಲಕ ತನ್ನ ವಾಹನದೊಂದಿಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.