ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿ ಎನ್‌ಕೌಂಟರ್ ನಲ್ಲಿ ಹತ ಆರ್ಮ್‌ಸ್ಟ್ರಾಂಗ್‌ ಹತ್ಯೆಗೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಲು ಮುಂದಾಗಿದ್ದ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಆತನ ಮೇಲೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆನ್ನೈ: ಬಿಎಸ್‌ಪಿ ಪಕ್ಷದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಆರ್ಮ್‌ಸ್ಟ್ರಾಂಗ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.ಆರ್ಮ್‌ಸ್ಟ್ರಾಂಗ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕೆ. ತಿರುವೆಂಗಡಂ ನನ್ನು ಸ್ಥಳಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರು ಆತನನ್ನು ಎನ್ಕೌಂಟರ್ ಮಾಡಿ ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ ತನಿಖೆಯ ಭಾಗವಾಗಿ ಉತ್ತರ ಚೆನ್ನೈಗೆ ಆತನನ್ನು ಕರೆದೊಯ್ಯಲಾಗಿತ್ತು.ಈ ವೇಳೆ ಆರ್ಮ್‌ಸ್ಟ್ರಾಂಗ್‌ ಹತ್ಯೆಗೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಲು ಮುಂದಾಗಿದ್ದ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಆತನ ಮೇಲೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗಂಭೀರವಾಗಿ ಗಾಯಗೊಂಡಿದ್ದ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 30 ವರ್ಷದ ತಿರುವೆಂಗಡಂ ಅವರು ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣದಲ್ಲಿ ಬಂಧಿತರಾದ 11 ಮಂದಿ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಮೂಲತಃ ರೌಡಿ ಶೀಟರ್ ಆಗಿರುವ ತಿರುವೆಂಗಡಂ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಲಯವು ಐದು ದಿನ ಪೊಲೀಸರ ವಶಕ್ಕೆ ನೀಡಿತ್ತು.ಬಿಎಸ್ ಪಿ ನಾಯಕನ ಭೀಕರ ಹತ್ಯೆಜುಲೈ 5ರಂದು ಆರ್ಮ್‌ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆಯನ್ನು ಖಂಡಿಸಿದ್ದ ವಿಪಕ್ಷ ನಾಯಕರು ಡಿಎಂಕೆ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆಕ್ರೋಶ ಹೊರಹಾಕಿದ್ದರು. : , " , . ? . ' , … ://./nRdZgGU386 ../6EX3Aww6sLಶರಣಾದವನು ಪರಾರಿಯಾಗಲು ಏಕೆ ಯತ್ನಿಸುತ್ತಾನೆ? ಇದು ನಕಲಿ ಎನ್ಕೌಂಟರ್ ಎಂದ AIADMKಇದನ್ನು ನಕಲಿ ಎನ್ಕೌಂಟರ್ ಎಂದು ಕರೆದಿರುವ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ, ಆರೋಪಿ ಶರಣಾಗಿದ್ದಾನೆ.. ಹೀಗಿರುವಾಗ ಆತ ಏಕೆ ಪರಾರಿಯಾಗಲು ಯತ್ನಿಸುತ್ತಾನೆ. ಆತನನ್ನು ಉದ್ದೇಶಪೂರ್ವಕವಾಗಿ ಎನ್ಕೌಂಟರ್ ಹೆಸರಿನಲ್ಲಿ ಮುಗಿಸಲಾಗಿದೆ. ಅವನನ್ನು ಏಕೆ ಕೊಲ್ಲಲಾಯಿತು? ಇದು ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದಲ್ಲಿ ಅನುಮಾನಗಳನ್ನು ಹುಟ್ಟುಹಾಕಿದೆ. ಆರ್ಮ್‌ಸ್ಟ್ರಾಂಗ್ ಕುಟುಂಬವೂ ಅನುಮಾನಗಳನ್ನು ಹುಟ್ಟುಹಾಕುತ್ತಿದೆ. ಈ ಬಗ್ಗೆ ಕುಲಂಕಷ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.