ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌: 7 ಮಾವೋವಾದಿಗಳ ಹತ್ಯೆ ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತರಾಗಿದ್ದಾರೆ. ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಯಿತು ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಅವರು ಹೇಳಿದ್ದಾರೆ.ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ 'ಮಾವೋವಾದಿ ಸಮವಸ್ತ್ರ'ದಲ್ಲಿದ್ದ ಏಳು ನಕ್ಸಲರು ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.ದಾಂತೇವಾಡ, ನಾರಾಯಣಪುರ ಮತ್ತು ಬಸ್ತಾರ್ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಸಿಬ್ಬಂದಿ, ಬಸ್ತಾರ್ ಫೈಟರ್ಸ್ ಮತ್ತು ವಿಶೇಷ ಕಾರ್ಯಪಡೆ- ರಾಜ್ಯ ಪೊಲೀಸ್‌ನ ಎಲ್ಲಾ ಘಟಕಗಳು, ಮಾವೋವಾದಿಗಳ ಉಪಸ್ಥಿತಿಯ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.ಎನ್‌ಕೌಂಟರ್ ಸ್ಥಳದಿಂದ ಒಟ್ಟು ಏಳು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಭಾತ್ ಕುಮಾರ್ ತಿಳಿಸಿದ್ದಾರೆ.