ಆಟೋ ಚಾಲಕನೊಂದಿಗೆ ವಾಗ್ವಾದ: ಹೃದಯಾಘಾತದಿಂದ ಶಿವಸೇನೆ ನಾಯಕನ ಪುತ್ರ ಸಾವು! ಮೋರೆ ಸಂಬಂಧಿಕರ ದೂರಿನ ಆಧಾರದ ಮೇಲೆ, ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಸೆಕ್ಷನ್ 105 (ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ. ಪಾಲ್ಘರ್: ಆಟೋ ಚಾಲಕನೊಂದಿಗೆ ವಾಗ್ವಾದ ನಡೆಸುತ್ತಿದ್ದಾಗ ಹೃದಯಾಘಾತದಿಂದ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕನ ಪುತ್ರ ಸಾವನ್ನಪ್ಪಿದ್ದಾನೆ.ಪಾಲ್ಘರ್ ನ ವಸೈ ಎಂಬಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಅನಾಮಿಕ ವ್ಯಕ್ತಿಯ ವಿರುದ್ಧ ಅನೈಚ್ಛಿಕ ತಪ್ಪಿತಸ್ಥ ನರಹತ್ಯೆ ( ) ಪ್ರಕರಣ ದಾಖಲಿಸಿದ್ದಾರೆ. ಹತ್ಯೆಯ ಆರೋಪಕ್ಕೆ ಗುರಿಯಾಗದ ಆರೋಪವಾಗಿದೆ.ಶಿವಸೇನೆಯ ಥಾಣೆ ಜಿಲ್ಲೆಯ ಮಾಜಿ ಮುಖ್ಯಸ್ಥರಾಗಿದ್ದ ರಘುನಾಥ್ ಮೋರೆ ಪುತ್ರ ಮಿಲಿಂದ್ ಮೋರೆ (45 ವರ್ಷ) ಮೃತ ವ್ಯಕ್ತಿಯಾಗಿದ್ದು, ಘಟನೆ ನಡೆದಾಗ ಮಿಲಿಂದ್ ಮೋರೆ ಕುಟುಂಬದವರೊಂದಿಗೆ ನವಪುರ್ ರೆಸಾರ್ಟ್ ನಲ್ಲಿದ್ದರು ಎಂದು ಡಿಸಿಪಿ ಜಯಂತ್ ಬಜ್ಬಲೆ ಹೇಳಿದ್ದಾರೆ. ರೆಸಾರ್ಟ್ ನ ಹೊರಹೋಗುವಾಗ ಮಿಲಿಂದ್ ಮೋರೆ- ಆಟೋ ಚಾಲಕನ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆತ ಕುಸಿದುಬಿದ್ದಿದ್ದು, ಕೂಡಲೇ ಮಿಲಿಂದ್ ನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮಾರ್ಗಮಧ್ಯೆಯೇ ಮಿಲಿಂದ್ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಮಿಲಿಂದ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ಮೋರೆ ಸಂಬಂಧಿಕರ ದೂರಿನ ಆಧಾರದ ಮೇಲೆ, ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಸೆಕ್ಷನ್ 105 (ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ. ಮಿಲಿಂದ್ ಮೋರೆ ಅವರು ಶಿವಸೇನೆಯ (ಯುಬಿಟಿ) ಥಾಣೆ ಘಟಕದ ಉಪ ಮುಖ್ಯಸ್ಥರಾಗಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.ಘಟನೆಯ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರ್ನಾಲಾ ಬೀಚ್ ಬಳಿಯ ಅನಧಿಕೃತ ರೆಸಾರ್ಟ್‌ಗಳನ್ನು ನೆಲಸಮಗೊಳಿಸುವಂತೆ ನಾಗರಿಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಿಎಂಒ ಪ್ರಕಟಣೆ ತಿಳಿಸಿದೆ.ವಸಾಯಿ-ವಿರಾರ್ ಮುನ್ಸಿಪಲ್ ಕಾರ್ಪೊರೇಷನ್ (ವಿವಿಎಂಸಿ) ಈ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಪ್ರಾರಂಭಿಸಿದೆ ಎಂದು ಹೇಳಲಾಗಿದೆ.