ಪತಿ ಬಳಸಬೇಡ ಎಂದಿದ್ದಕ್ಕೇ ಮನ ನೊಂದ ಪತ್ನಿ ಆತ್ಮಹತ್ಯೆ! ಮೊಬೈಲ್ ನಲ್ಲಿ ಬಳಕೆ ಮಾಡಬೇಡ ಎಂದು ಪತಿ ಹೇಳಿದ ಕಾರಣಕ್ಕೇ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ನೋಯ್ಡಾ: ಮೊಬೈಲ್ ನಲ್ಲಿ ಬಳಕೆ ಮಾಡಬೇಡ ಎಂದು ಪತಿ ಹೇಳಿದ ಕಾರಣಕ್ಕೇ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.ನೋಯ್ಡಾದ ಸೆಕ್ಟರ್ 39 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸದರ್‌ಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸದರ್‌ಪುರ ಕಾಲೋನಿ ನಿವಾಸಿಯಾಗಿರುವ ಮಹಿಳೆ ಅತಿಯಾಗಿ ಇನ್‌ಸ್ಟಾಗ್ರಾಮ್ ಬಳಕೆ ಮಾಡುತ್ತಿದ್ದರು. ಅತಿಯಾಗಿ ಅಡಿಕ್ಟ್ ಆಗಿದ್ದರಿಂದ ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಜಗಳ ಕೂಡ ನಡೆಯುತ್ತಿತ್ತು.ಸೋಮವಾರ ಈ ಜಗಳ ತಾರಕಕ್ಕೇರಿ ಪತಿ ಬಳಕೆ ಮಾಡದಂತೆ ಸೂಚಿಸಿದ್ದರಿಂದ ಮನನೊಂದ ಮಹಿಳೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಬಗ್ಗೆ ತಿಳಿದ ಸ್ಥಳೀಯ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕಾಗಮಿಸಿ ಸ್ಥಳವನ್ನು ಪರಿಶೀಲಿಸಿದೆ. ದಂಪತಿಗೆ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.