ಕೇರಳದ ವಯನಾಡಿನಲ್ಲಿ ಭೂಕುಸಿತ: ಐವರು ಸಾವು, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯ ಬಿರುಸು ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ನಸುಕಿನ ಜಾವ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಉಂಟಾಗಿ ಇಬ್ಬರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಹಲವರು ಮಣ್ಣಿನೊಳಗೆ ಸಿಲುಕಿಹಾಕಿಕೊಂಡಿರುವ ಶಂಕೆಯಿದೆ. ವಯನಾಡು: ಉತ್ತರ ಕನ್ನಡ ಶಿರೂರು ಬಳಿ ಭೂಕುಸಿತದಿಂದ ಸಾವು-ನೋವು ಘಟನೆ ಮಾಸುವ ಮುನ್ನವೇ ಕೇರಳದ ವಯನಾಡಿನಲ್ಲಿ ಇಂದು ಮಂಗಳವಾರ ನಸುಕಿನ ಜಾವ ಅಂತಹದ್ದೇ ದುರ್ಘಟನೆ ಸಂಭವಿಸಿದೆ.ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ನಸುಕಿನ ಜಾವ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಉಂಟಾಗಿ ಇಬ್ಬರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಹಲವರು ಮಣ್ಣಿನೊಳಗೆ ಸಿಲುಕಿಹಾಕಿಕೊಂಡಿರುವ ಶಂಕೆಯಿದೆ.ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ () ಭೂಕುಸಿತವಾದ ಪ್ರದೇಶಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ.ಕೆಎಸ್‌ಡಿಎಂಎ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ಕಣ್ಣೂರು ರಕ್ಷಣಾ ಡಿಕ್ಯೂರಿಟಿ ಕಾರ್ಪೊರೇಷನ್‌ಗಳ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ.ಎಲ್ಲಾ ಸರ್ಕಾರಿ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. | : , : ://./ko9su78ihn : ../aldDIbK9izಸಂತ್ರಸ್ತ ಪ್ರದೇಶಗಳ ಸ್ಥಳೀಯರು ಹೇಳುವಂತೆ ಹಲವರು ಸಿಕ್ಕಿಬಿದ್ದಿರುವ ಆತಂಕವಿದೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಮತ್ತು ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನ್ನು ನೀಡಿದೆ. ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಎಂಐ-17 ಮತ್ತು ಎಎಲ್‌ಹೆಚ್ ಸೂಲೂರಿನಿಂದ ಬೆಳಗ್ಗೆ 7.30ಕ್ಕೆ ಹೊರಡಲಿವೆ. ರಕ್ಷಣಾ ಕಾರ್ಯಾಚರಣೆಯನ್ನು ಸಮನ್ವಯಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.