ಕೇರಳದಲ್ಲಿ ಭಾರೀ ಮಳೆ; 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗಿನ ಭಾರೀ ಮಳೆ ಮತ್ತು ಹಳದಿ ಅಲರ್ಟ್ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ. ತಿರುವನಂತಪುರಂ: ಕೇರಳದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಶನಿವಾರ ದೇವರ ನಾಡಿನ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.ಐಎಂಡಿ ಕೇರಳದ ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್ ಮತ್ತು ರಾಜ್ಯದ ಇತರೆ ಒಂಬತ್ತು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ.ಹವಾಮಾನ ಇಲಾಖೆಯು ಪಥನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆ ಮತ್ತು ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.ಜುಲೈ 14 ರಿಂದ ಜುಲೈ 16 ರವರೆಗೆ ರಾಜ್ಯದ ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗಿನ ಭಾರೀ ಮಳೆ ಮತ್ತು ಹಳದಿ ಅಲರ್ಟ್ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ.ಉತ್ತರ ಗುಜರಾತ್ ಮತ್ತು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ ಐದು ದಿನಗಳಲ್ಲಿ ಕೇರಳದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹೇಳಿದೆ.