ಪತ್ನಿ ಜೊತೆಗೆ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ ಅಮಿತ್‌ ಶಾ! ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಿರುಮಲ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಮಿತ್ ಶಾ ಕುಟುಂಬ ಸಮೇತರಾಗಿ ಆಗಮಿಸಿದ್ದರು, ಮೊದಲು ರೇಣುಗುಂಟ ವಿಮಾನ ನಿಲ್ದಾಣಕ್ಕೆ ಬಂದಿಳಿದರು ರಸ್ತೆಯ ಮೂಲಕ ತಿರುಪತಿಗೆ ತಲುಪಿದರು. ಪ್ರಧಾನ ಅರ್ಚಕರು ವೈದಿಕ ಸ್ತೋತ್ರ ಪಠಣದ ನಡುವೆ ಅವರಿಗೆ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು. ಭೇಟಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅಮಿತ್ ಶಾ, ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪೆಯು ಪ್ರತಿಯೊಬ್ಬರ ಜೀವನದಲ್ಲಿ ಮೇಲಿರಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. , . ' . ../aMZhxjHk86ಲೋಕಸಭಾ ಚುನಾವಣೆಯ ಕೊನೆಯ ಮತ್ತು 7ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಅಂತ್ಯವಾಗಿದ್ದು ಶನಿವಾರ ಚುನಾವಣೆ ನಡೆಯಲಿದೆ. ಶನಿವಾರ ಸಂಜೆಯಿಂದ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದ್ದು ಜೂನ್‌ 4 ರಂದು ಫಲಿತಾಂಶ ಪ್ರಕಟವಾಗಲಿದೆ.