ಉತ್ತರ ಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಪ್ರಧಾನಿ ಮೋದಿ, ಬಿಜೆಪಿ ನಾಯಕರ ಭೇಟಿಗೆ ಯೋಗಿ ಆದಿತ್ಯನಾಥ್ ಮುಂದು! ಜುಲೈ 27 ರಂದು ದೆಹಲಿಯಲ್ಲಿ ನಡೆಯುವ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅಥವಾ ನಂತರ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಲಖನೌ: ಉತ್ತರ ಪ್ರದೇಶದ ಬಿಜೆಪಿಯಲ್ಲಿನ ಬಿಕ್ಕಟ್ಟು ಮತ್ತು ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ನಡುವಿನ ಭಿನ್ನಾಭಿಪ್ರಾಯದ ನಡುವೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ನಾಯಕರನ್ನು ಭೇಟಿ ಮಾಡಲು ಯೋಜಿಸಿದ್ದಾರೆ.ಜುಲೈ 27 ರಂದು ದೆಹಲಿಯಲ್ಲಿ ನಡೆಯುವ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅಥವಾ ನಂತರ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ.ಮುಂದಿನ ವಾರ ನಡೆಯಲಿರುವ ಆಯೋಗದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವ ಯುಪಿ ಸಿಎಂ, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿ ಯುಪಿ ಬಿಜೆಪಿಯೊಳಗಿನ ವಿದ್ಯಮಾನಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.ಜುಲೈ 29 ರಂದು ಲಖನೌದಲ್ಲಿ ಪ್ರಾರಂಭವಾಗಲಿರುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಕೇವಲ ಎರಡು ದಿನಗಳ ಮೊದಲು ಯೋಗಿ ಆದಿತ್ಯನಾಥ್ ಅವರ ದೆಹಲಿ ಭೇಟಿ ಮಹತ್ವವನ್ನು ಪಡೆದುಕೊಂಡಿದೆ.ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ ಅನುಭವಿಸಿದ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡುವ ಬಗ್ಗೆಯೂ ಯುಪಿ ಸಿಎಂ ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಇದಲ್ಲದೆ, ಮುಂಬರುವ ಉಪಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಯಬಹುದು ಎನ್ನಲಾಗಿದೆ.