ಸತತ ಮಳೆಗೆ ರಾಜಧಾನಿ ದೆಹಲಿ ತತ್ತರ: ತಗ್ಗು ಪ್ರದೇಶಗಳು, ರಸ್ತೆಗಳು ಜಲಾವೃತ ಸಫ್ದರ್‌ಜಂಗ್ ಹವಾಮಾನ ಕೇಂದ್ರವು 153.7 ಮಿಮೀ ಮಳೆಯನ್ನು ದಾಖಲಿಸಿದೆ, ಇಂದು ನಸುಕಿನ ಜಾವ 3 ಗಂಟೆಯಿಂದ ಮಳೆ ಸುರಿಯುತ್ತಿದೆ. ನವದೆಹಲಿ: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಜಧಾನಿ ದೆಹಲಿ ತತ್ತರಿಸಿ ಹೋಗಿದೆ. ಇಂದು ಶುಕ್ರವಾರ ಮುಂಜಾನೆಯಿಂದ ದೆಹಲಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ರಸ್ತೆಗಳು ಜಲಾವೃತವಾಗಿವೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದಿದೆ.ಸಫ್ದರ್‌ಜಂಗ್ ಹವಾಮಾನ ಕೇಂದ್ರವು 153.7 ಮಿಮೀ ಮಳೆಯನ್ನು ದಾಖಲಿಸಿದೆ, ಇಲ್ಲಿ ಇಂದು ನಸುಕಿನ ಜಾವ 3 ಗಂಟೆಯಿಂದ ಮಳೆ ಸುರಿಯುತ್ತಿದೆ. ಜನರು ಜಲಾವೃತಗೊಂಡ ರಸ್ತೆಗಳು ಮತ್ತು ಟ್ರಾಫಿಕ್ ದಟ್ಟಣೆಯಲ್ಲಿ ಸಿಲುಕಿರುವ ವಾಹನಗಳ ವೀಡಿಯೊಗಳು ಮತ್ತು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.# | , . ( ) ../HdVpxBFPaRವೈ-ಪಾಯಿಂಟ್ ಸಲೀಮ್‌ಗಢ್ ಮತ್ತು ನಿಗಮಬೋಧ್ ಘಾಟ್ ಬಳಿ ಜಲಾವೃತವಾಗಿರುವ ಕಾರಣ ಶಾಂತಿವನದಿಂದ ಐಎಸ್‌ಬಿಟಿ ಕಡೆಗೆ ಮತ್ತು ಹೊರ ವರ್ತುಲ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ ಎಂದು ದೆಹಲಿ ಸಂಚಾರ ಪೊಲೀಸ್ ಇಲಾಖೆ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.ಐಟಿಒ, ವೀರ್ ಬಂದಾ ಬೈರಾಗಿ ಮಾರ್ಗ, ಧೌಲಾ ಕುವಾನ್‌ನಲ್ಲಿಯೂ ಜಲಾವೃತಗೊಂಡಿದ್ದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಒಂದೇ ದಿನದಲ್ಲಿ 124.5 ಮತ್ತು 244.4 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.# | . ( 10:30 ) ../GCRpNxJ0vb# | #, . 📹. ../3HuE3G2exI