ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗೆ , ಹಣ ಬಳಕೆ ರಾಹುಲ್‌ ಗಾಂಧಿ ದ್ವಂದ್ವ ನೀತಿಯನ್ನು ಬಯಲು ಮಾಡಿದೆ: ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡಿದೆ ಎಂದು ಆರೋಪಿಸಿದ ಮೇಘವಾಲ್, ಅವರು ಕೆಲವು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರಬಹುದು ಆದರೆ ಜನರ ಹೃದಯವನ್ನು ಎಂದಿಗೂ ಗೆಲ್ಲಲು ಸಾಧ್ಯವಿಲ್ಲ ಎಂದರು. ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿಟ್ಟಿರುವ ನಿಧಿಯನ್ನು ರಾಜ್ಯ ಚುನಾವಣಾ ಸಮಯದಲ್ಲಿ ರಾಹುಲ್ ಗಾಂಧಿ ನೀಡಿದ ಭರವಸೆಗಳನ್ನು ಈಡೇರಿಸಲು ಬೇರೆಡೆಗೆ ತಿರುಗಿಸುತ್ತಿದೆ. ಇದು ಅವರ ದ್ವಂದ್ವ ನೀತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿದೆ.ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಸಂವಿಧಾನದ ಉಲ್ಲಂಘನೆಯಾಗಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಕರ್ನಾಟಕದಲ್ಲಿ ಜನರನ್ನು ವಂಚಿಸಲಾಗುತ್ತಿದೆ. ಒಂದೆಡೆ ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆಯಾಗುತ್ತಿದೆ. ಎಸ್‌ಸಿ ಮತ್ತು ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾದ 39,121 ಕೋಟಿ ರೂ.ಗಳಲ್ಲಿ 14,730 ಕೋಟಿ ರೂ.ಗಳನ್ನು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಭರವಸೆಗಳಡಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವ್ಯಯಿಸುತ್ತಿದೆ ಎಂದು ಅವರು ವರದಿಯನ್ನು ಉಲ್ಲೇಖಿಸಿ ಹೇಳಿದರು. @ . ://./7ah2h6fZXuಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡಿದೆ ಎಂದು ಆರೋಪಿಸಿದ ಮೇಘವಾಲ್, ಅವರು ಕೆಲವು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರಬಹುದು ಆದರೆ ಜನರ ಹೃದಯವನ್ನು ಎಂದಿಗೂ ಗೆಲ್ಲಲು ಸಾಧ್ಯವಿಲ್ಲ. ಮೋದಿ ಸರ್ಕಾರವು ದೊಡ್ಡ ಜನಾದೇಶವನ್ನು ಪಡೆಯುವ ಮೂಲಕ ಸಂವಿಧಾನವನ್ನು ಬದಲಾಯಿಸಲು ಬಯಸಿದೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. ಅವರ ಕಾರ್ಯಗಳೇ ಅವರ ಧ್ವಂದ್ವ ನೀತಿಯನ್ನು ತೋರಿಸುತ್ತಿದೆ ಎಂದು ಕಿಡಿಕಾರಿದರು.ಇತ್ತೀಚೆಗೆ ವಿಚ್ಛೇದಿತ ಮುಸ್ಲಿಂ ಮಹಿಳೆಗೆ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಬಗ್ಗೆ ಕೇಳಿದಾಗ, ಸುಪ್ರೀಂ ಕೋರ್ಟ್‌ನ ತೀರ್ಪನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.