ಥಾಣೆ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕನ ಬಂಧನ ಆರೋಪಿಯನ್ನು ಮುಝಮ್ಮಿಲ್ ಎಂದು ಗುರುತಿಸಲಾಗಿದ್ದು, ಬುಧವಾರ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿರುವ ಮಹಾನಗರ ಪಾಲಿಕೆಯ ಶಾಲೆಯೊಂದರಲ್ಲಿ ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.ಆರೋಪಿಯನ್ನು ಮುಝಮ್ಮಿಲ್ ಎಂದು ಗುರುತಿಸಲಾಗಿದ್ದು, ಬುಧವಾರ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.ಶಿಕ್ಷಕ ತನ್ನ ಮೊಬೈಲ್ ಫೋನ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ್ದು, ಈ ವಿಚಾರವನ್ನು ಬಾಲಕಿಯೊಬ್ಬಳು ತನ್ನ ಪೋಷಕರಿಗೆ ತಿಳಿಸಿದ್ದರಿಂದ ಆತನ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ."7 ನೇ ತರಗತಿಯ ಬಾಲಕಿ ತನ್ನ ಶಾಲೆಗೆ ನಿತ್ಯ ತಡವಾಗಿ ಹೋಗುತ್ತಿದ್ದಳು. ಬಾಲಕಿ ಏಕೆ ಬರುತ್ತಿದ್ದಾಳೆ ಎಂದು ತಿಳಿಯಲು ಶಾಲೆಯ ಮುಖ್ಯೋಪಾಧ್ಯಾಯರು ಆಕೆಯ ಪೋಷಕರಿಗೆ ಕರೆ ಮಾಡಿದ್ದಾರೆ. ನಂತರ ಪೋಷಕರು ಬಾಲಕಿ ಮನೆ ಬಂದ ನಂತರ ವಿಚಾರಿಸಿದಾಗ, ಶಿಕ್ಷಕನೊಬ್ಬ ತನ್ನ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದಾಗಿನಿಂದ ಶಾಲೆಗೆ ಹೋಗಲು ಮನಸ್ಸಿಲ್ಲ ಎಂದು ಹೇಳಿದ್ದಾಳೆ ಎಂದು ಶಾಂತಿನಗರ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ವಿನಾಯಕ ಗಾಯಕವಾಡ್ ತಿಳಿಸಿದ್ದಾರೆ.ನಂತರ ಇತರ ವಿದ್ಯಾರ್ಥಿನಿಯರು ಕೂಡ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದು, ಪೋಷಕರು ಪೊಲೀಸರನ್ನು ಸಂಪರ್ಕಿಸಿ ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.