ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಭಾರೀ ನಿರೀಕ್ಷೆ ಮೂಡಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಭಾರತ ತಂಡದ ವಿರುದ್ಧ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಸೌಥ್ಯಾಂಪ್ಟನ್: ಭಾರೀ ನಿರೀಕ್ಷೆ ಮೂಡಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಭಾರತ ತಂಡದ ವಿರುದ್ಧ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ರೋಸ್ ಬೌಲ್ ನ ಸೌಥ್ಯಾಂಪ್ಟನ್ ಕ್ರೀಡಾಂಗಣದಲ್ಲಿ ನಿನ್ನೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಆರಂಭವಾಗಿರಲಿಲ್ಲ. ಮೈದಾನದಲ್ಲಿ ತುಂಬಿದ್ದ ನೀರಿನಿಂದಾಗಿ ಇಡೀ ದಿನದ ಪಂದ್ಯ ರದ್ದಾಗಿತ್ತು. ಇದೀಗ ನಿರಂತರವಾಗಿ ಮೈದಾನದ ಸಿಬ್ಬಂದಿಗಳು ಹರಸಾಹಸಪಟ್ಟು ಮೈದಾನದ ಅಂಗಳದಲ್ಲಿದ್ದ ನೀರನ್ನು ತೆಗೆದು ಹಾಕಿ ಆಟಕ್ಕೆ ಮೈದಾನವನ್ನು ಸಜ್ಜುಗೊಳಿಸಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.# , -19.ಲೈವ್ ಸ್ಕೋರ್: