2024: ವಿರುದ್ಧ ಗೆ 7 ವಿಕೆಟ್ ಭರ್ಜರಿ ಜಯ ಐಪಿಎಲ್ 2024ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು () ತಂಡಕ್ಕೆ ಮತ್ತೊಂದು ಆಘಾತಕಾರಿ ಸೋಲು ಎದುರಾಗಿದೆ. ಬೆಂಗಳೂರು: ಐಪಿಎಲ್ 2024ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು () ತಂಡಕ್ಕೆ ಮತ್ತೊಂದು ಆಘಾತಕಾರಿ ಸೋಲು ಎದುರಾಗಿದೆ.ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತದ ಹೊರತಾಗಿಯೂ 7 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.ಆರ್ ಸಿಬಿ ನೀಡಿದ 183 ರನ್ ಗಳ ಗುರಿಯನ್ನು ಕೋಲ್ಕತಾ ತಂಡ ಕೇವಲ 3 ವಿಕೆಟ್ ನಷ್ಟಕ್ಕೆ 16.5 ಓವರ್ ನಲ್ಲಿ 186 ರನ್ ಗಳಿಸಿ ಗುರಿ ಮುಟ್ಟಿತು. ಆ ಮೂಲಕ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಕೆಕೆಆರ್ ಪರ ವೆಂಕಟೇಶ್ ಅಯ್ಯರ್ (50) ಅರ್ಧಶತಕ, ಸುನಿಲ್ ನರೇನ್ 47 ರನ್, ಫಿಲಿಪ್ ಸಾಲ್ಟ್ 30ರನ್, ಶ್ರೇಯಸ್ ಅಯ್ಯರ್ ಅಜೇಯ 39 ರನ್ ಗಳಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. 10. 7 () ://./CJLmcs7ICI # #IPL2024 #