3ನೇ ಟೆಸ್ಟ್: ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ; ಇಂಗ್ಲೆಂಡ್ ವಿರುದ್ಧ ಈ ದಾಖಲೆ ಮಾಡಿದ ಮೊದಲ ಆಟಗಾರ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತದ ಸ್ಫೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ. ರಾಜ್ ಕೋಟ್: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತದ ಸ್ಫೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ.ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಮೂರನೇ ದಿನ ಭಾರತದ ಪರ ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಜೈಸ್ವಾಲ್ ಗಾಯಗೊಂಡು ನಿವೃತ್ತಿ ಗೊಂಡಿದ್ದರು. ಬಳಿಕ ನಾಲ್ಕನೇ ದಿನದಾಟದಲ್ಲಿ ಶುಭಮನ್ ಗಿಲ್‌ (91) ವಿಕೆಟ್‌ ಪತನದ ಬಳಿಕ ಮರಳಿ ಕ್ರೀಸ್‌ಗೆ ಬಂದು ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿಬದುಕಿನ 2ನೇ ದ್ವಿಶತಕ ಬಾರಿಸಿದರು.ಇಂಗ್ಲೆಂಡ್ ವಿರುದ್ಧ 2 ದ್ವಿಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ಈ ಮೂಲಕ ಟೆಸ್ಟ್‌ ಕ್ರಿಕೆಟ್‌ ಸರಣಿ ಒಂದರಲ್ಲಿ ಬ್ಯಾಕ್‌ ಟು ಬ್ಯಾಕ್‌ ದ್ವಿಶತಕ ಬಾರಿಸಿದ ಭಾರತದ ಮೊದಲ ಬ್ಯಾಟರ್‌ ಎಂಬ ದಾಖಲೆಯನ್ನು 22 ವರ್ಷದ ಯುವ ಎಡಗೈ ಬ್ಯಾಟರ್‌ ತಮ್ಮದಾಗಿಸಿಕೊಂಡರು. ವಿರಾಟ್‌ ಕೊಹ್ಲಿ (2017ರಲ್ಲಿ) ಮತ್ತು ವಿನೋದ್‌ ಕಾಂಬ್ಳಿ (1993ರಲ್ಲಿ) ಈ ಮೊದಲು ಬ್ಯಾಕ್‌ ಟು ಬ್ಯಾಕ್‌ ದ್ವಿಶತಕ ಬಾರಿಸಿದ ಭಾರತೀಯ ಬ್ಯಾಟರ್‌ಗಳಾಗಿದ್ದಾರೆ. 200s () : 224 | 227 (1992/93) : 213 | 243 (2017/18) : 209 | 200* (2023/24) ! ☺️ 👏 🤔 ▶️ ://./FM0hVG5pje# | # | @ybj_19 | @ ../kun7eMiFdw2ನೇ ಇನ್ನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿ ಎಲೈಟ್ ಪಟ್ಟಿ ಸೇರಿದ ಜೈಸ್ವಾಲ್ಇನ್ನು ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ಈ ಸಾಧನೆ ಮಾಡಿದ ಇತರೆ ಭಾರತೀಯ ಆಟಗಾರರ ಎಲೈಟ್ ಪಟ್ಟಿ ಸೇರಿದ್ದಾರೆ. ಈ ಹಿಂದೆ 1964 ಮನ್ಸೂಲ್‌ ಅಲಿ ಖಾನ್‌ ಪಟೌಡಿ (ಅಜೇಯ 203 ರನ್), 1965ರಲ್ಲಿ ಡಿ ಸರ್ದೇಸಾಯ್‌ (ಅಜೆಯೇ 200 ರನ್), 1971ರಲ್ಲಿ ಸುನಿಲ್ ಗವಾಸ್ಕರ್ (220 ರನ್), 2001ರಲ್ಲಿ ವಿವಿಎಸ್ ಲಕ್ಷಣ್ (281 ರನ್) ಮತ್ತು 2006ರಲ್ಲಿ ವಸೀಂ ಜಾಫರ್ (212 ರನ್) ದ್ವಿತಶಕ ಸಿಡಿಸಿದ ಸಾಧನೆ ಗೈದಿದ್ದಾರೆ. ಇದೀಗ ಈ ಪಟ್ಟಿಗೆ ಜೈಸ್ವಾಲ್ ಕೂಡ ಸೇರ್ಪಡೆಯಾಗಿದ್ದಾರೆ. India203* 1964200* 1965220 1971221 1979281 2001212 ' 2006200* 2024ಸಿಕ್ಸರ್ ನಲ್ಲೂ ಜೈಸ್ವಾಲ್ ದಾಖಲೆಇನ್ನು ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಿಡಿಸಿದ ಜೈಸ್ವಾಲ್, ಇದೇ ಪಂದ್ಯದಲ್ಲಿ ಸಿಕ್ಸರ್ ಗಳ ಮೂಲಕವೂ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 2ನೇ ಇನ್ನಿಂಗ್ಸ್ ನಲ್ಲಿ ಜೈಸ್ವಾಲ್ ಒಟ್ಟು 12 ಸಿಕ್ಸರ್ ಸಿಡಿಸಿದ್ದು, ಆ ಮೂಲಕ 1996ರಲ್ಲಿ ಪಾಕಿಸ್ತಾನದ ಆಲ್ರೌಂಡರ್ ವಸೀಂ ಅಕ್ರಂರ ದಾಖಲೆಯನ್ನು ಜೈಸ್ವಾಲ್ ಸರಿಗಟ್ಟಿದ್ದಾರೆ. innings12 2024 *12 199611 200311 200211 201411 201411 201611 20232⃣1⃣4⃣* 2⃣3⃣6⃣ 1⃣4⃣ 1⃣2⃣ ⚡️ ⚡️ # | # | @ybj_19 | @ 🎥 🔽://./a7p5gXdNxQ