ಆಸ್ಟ್ರೇಲಿಯಾದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ಗೆ ಲೋಡ್ ಮಾಡಿದ ಪಾಕಿಸ್ತಾನ ಕ್ರಿಕೆಟಿಗರು: ವಿಡಿಯೋ ವೈರಲ್ ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.ಪಾಕಿಸ್ತಾನದಿಂದ ತಂದಿರುವ ತಮ್ಮ ಕಿಟ್ ಗಳು ಹಾಗೂ ಲಗೇಜ್ ಗಳನ್ನು ಟ್ರಕ್ ತುಂಬುತ್ತಿದ್ದು, ಈ ವೇಳೆ ಪಾಕಿಸ್ತಾನ ತಂಡದ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮಹಮದ್ ರಿಜ್ವಾನ್ ಸಹ ಆಟಗಾರರಿಗೆ ನೆರವು ನೀಡಿದ್ದು ಮಾತ್ರವಲ್ಲದೇ ಅಲ್ಲಿ ಆಟಗಾರರನ್ನು ನೋಡಲು ನೆರೆದಿದ್ದ ಅಭಿಮಾನಿಗಳಿಗೂ ಸೆಲ್ಫಿ ತೆಗೆದುಕೊಳ್ಳಲು ನೆರವು ನೀಡಿದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ. 3 14. . ../H65ofZnhlFಇದನ್ನೂ ಓದಿ: 4ನೇ ಟಿ20 ಪಂದ್ಯ: ಏಕದಿನ ವಿಶ್ವ ಚಾಂಪಿಯನ್ ಆಸೀಸ್ ಬಗ್ಗುಬಡಿದ ಭಾರತಕ್ಕೆ 20 ರನ್ ಜಯ, ಸರಣಿ ವಶಅಂದಹಾಗೆ ಪಾಕಿಸ್ತಾನ ತಂಡ ಆಸ್ಟ್ರೇಲಿಯಾದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಿದೆ. ವಿಶ್ವಕಪ್ ಸೋಲಿನ ಬಳಿಕ ತಂಡದ ನಾಯಕ ಸ್ಥಾನದಿಂದ ಬಾಬರ್ ಅಜಂ ಕೆಳಗಿಳಿದ ಬಳಿಕ ಆ ಸ್ಥಾನಕ್ಕೆ ಶಾನ್ ಮಸೂದ್ ರನ್ನು ನೇಮಕ ಮಾಡಲಾಗಿದೆ. ಹೊಸ ನಾಯಕನ ನೇತೃತ್ವದಲ್ಲಿ ಪಾಕಿಸ್ತಾನ ತಂಡಕ್ಕೆ ಇದು ಮೊದಲ ವಿದೇಶಿ ಸರಣಿಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ ಈ ವರೆಗೂ ಟೆಸ್ಟ್ ಸರಣಿ ಗೆದ್ದಿಲ್ಲ. ಹೀಗಾಗಿ ಈ ಹೀನಾಯ ದಾಖಲೆಯನ್ನು ಹೊಸ ನಾಯಕ ನೇತೃತ್ವದ ಪಾಕಿಸ್ತಾನ ತಂಡ ಮುರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.