ಏಷ್ಯಾ ಕಪ್ 2022: ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕ್ ಭಾರತ- ಪಾಕಿಸ್ತಾನ ನಡುವೆ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಪಾಕ್ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ದುಬೈ: ಭಾರತ- ಪಾಕಿಸ್ತಾನ ನಡುವೆ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಪಾಕ್ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇತ್ತೀಚಿನ ವರದಿಯ ಪ್ರಕಾರ, ಭಾರತದ ಆರಂಭಿಕ ಬ್ಯಾಟ್ಸ್ ಮನ್ ಗಳು ಉತ್ತಮ ಆರಂಭ ನೀಡಿದ್ದು, ಹಿಟ್ ಮ್ಯಾನ್ ರೋಹಿತ್ ಶರ್ಮಾ ಆರಂಭದಲ್ಲಿ ಬಿರುಸಿನಿಂದ ಬ್ಯಾಟಿಂಗ್ ಮಾಡಿದ್ದರು.ರೋಹಿತ್ ಶರ್ಮಾಗೆ ಕೆಎಲ್ ರಾಹುಲ್ ಉತ್ತಮ ಜೊತೆಯಾಟ ನೀಡಿದ್ದರು. ಭಾರತ ತಂಡದಲ್ಲಿ ಗಾಯಾಳುಗಳ ಪರಿಣಾಮ ಕೆಲವು ಬದಲಾವಣೆಗಳಾಗಿದ್ದು, ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಹಾರ್ದಿಕ್ ಪಾಂಡ್ಯ ಈ ಪಂದ್ಯಕ್ಕೆ ಮರಳಿದ್ದಾರೆ. ಗಾಯಗೊಂಡಿರುವ ರವೀಂದ್ರ ಜಡೇಜಾ ವಿಶ್ರಾಂತಿ ಪಡೆಯುತ್ತಿದ್ದಾರೆ.ಗಾಯಗೊಂಡಿರುವ ಮತ್ತೋರ್ವ ಆಟಗಾರ ಆವೇಶ್ ಖಾನ್ ಬದಲಿಗೆ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದಿನೇಶ್ ಕಾರ್ತಿಕ್ ಬದಲು ದೀಪಕ್ ಹೂಡಾ ಸ್ಥಾನ ಪಡೆದಿದ್ದರೆ, ರಿಷಭ್ ಪಂತ್ ವಿಕೆಟ್-ಕೀಪರ್ ಆಗಿದ್ದಾರೆ. ಪಾಕಿಸ್ತಾನ ತಂಡದಲ್ಲಿ ಮೊಹಮ್ಮದ್ ಹಸ್ನಿಯಾನ್ ಶಹನವಾಜ್ ದಹಾನಿ ಬದಲಿಗೆ ತಂಡಕ್ಕೆ ಬಂದಿದ್ದಾರೆ.