'ನನ್ನ ಮುಖ್ಯ ಗುರಿ ಏನೆಂದರೆ... ಅದಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ': ವಿರಾಟ್ ಕೊಹ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ನಲ್ಲಿದ್ದು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಪ್ರಸ್ತುತ ಕ್ರಿಕೆಟ್ ಅಂಗಳದಿಂದ ದೂರ ಉಳಿದಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ನಲ್ಲಿದ್ದು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಪ್ರಸ್ತುತ ಕ್ರಿಕೆಟ್ ಅಂಗಳದಿಂದ ದೂರ ಉಳಿದಿದ್ದಾರೆ. ಇಂಗ್ಲೆಂಡ್ ಪ್ರವಾಸದ ಬಳಿಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಸರಣಿಗೆ ಆಯ್ಕೆಯಾಗಿರಲಿಲ್ಲ. ಕಳಪೆ ಫಾರ್ಮ್‌ನಿಂದಾಗಿ ಭಾರತದ ಹಿರಿಯ ಬ್ಯಾಟ್ಸ್‌ಮನ್ ಈಗ ಮುಂದಿನ ತಿಂಗಳು ನಡೆಯಲಿರುವ ಏಷ್ಯಾ ಕಪ್ 2022ರಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆಯಲಿದ್ದು, ಬ್ಯಾಟಿಂಗ್ ನಲ್ಲಿ ಲಯ ಕಳೆದುಕೊಂಡಿರುವ ಕೊಹ್ಲಿಯನ್ನು ಈ ಮಾದರಿಯಿಂದ ಕೈಬಿಡಬೇಕು ಎಂಬ ಆಗ್ರಹಗಳು ಕೇಳಿ ಬರುತ್ತಿವೆ.ಈ ಮಧ್ಯೆ ಕೊಹ್ಲಿ ತಮ್ಮ ಮನದ ಮಾತುಗಳನ್ನು ಕ್ರೀಡಾಭಿಮಾನಿಗಳ ಮುಂದಿಟ್ಟಿದ್ದಾರೆ. ಏಷ್ಯಾಕಪ್ ಮತ್ತು ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾಗೆ ನೆರವಾಗುವುದು ನನ್ನ ಮುಖ್ಯ ಗುರಿ. ತಂಡಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದು ಕೊಹ್ಲಿ ವಿವರಿಸಿದ್ದನ್ನು ಸ್ಟಾರ್ ಸ್ಪೋರ್ಟ್ಸ್ ಟ್ವೀಟ್ ಮೂಲಕ ತಿಳಿಸಿದೆ. ಇದನ್ನೂ ಓದಿ: 'ಕಠಿಣ ಸಮಯ ಕೂಡ ಕಳೆದು ಹೋಗುತ್ತದೆ': ವಿರಾಟ್ ಕೊಹ್ಲಿಗೆ ಪಾಕ್ ನಾಯಕ ಬಾಬರ್ ಆಜಮ್ ಪಾಸಿಟಿವ್ ಸಂದೇಶಕೊಹ್ಲಿಯ ಈ ಹೇಳಿಕೆ ಇದೀಗ ಭಾರತೀಯ ಅಭಿಮಾನಿಗಳ ಉತ್ಸಾಹವನ್ನು ಹೆಚ್ಚಿಸಲಿದೆ. ಟಿ20 ವಿಶ್ವಕಪ್ ತಂಡದಲ್ಲಿ ಕೊಹ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರಾ ಇಲ್ಲವೆ ಎಂಬುದು ಮುಂದೆ ಕಾದುನೋಡಬೇಕಿದೆ. ಆದಾಗ್ಯೂ ಅವರು ಏಷ್ಯಾ ಕಪ್ ಗೆ ಆಯ್ಕೆಯಾಗುವುದು ಖಚಿತವಾಗಿದೆ. ಈ ಟೂರ್ನಿಯಲ್ಲಿನ ಕೊಹ್ಲಿ ಪ್ರದರ್ಶನ ವಿಶ್ವಕಪ್ ತಂಡದಲ್ಲಿನ ಭವಿಷ್ಯವನ್ನು ನಿರ್ಧರಿಸುತ್ತದೆ. ಆಗಸ್ಟ್ 27ರಿಂದ ಏಷ್ಯಾಕಪ್ ಆರಂಭವಾಗಲಿದೆ. ಟೂರ್ನಿ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಅಲ್ಲಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ಇದೀಗ ಪಂದ್ಯಾವಳಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆಯಲಿದೆ.