ಐಪಿಎಲ್ 2023: ಗುಜರಾತ್ ಟೈಟನ್ಸ್ ಗೆ ಭಾರಿ ಆಘಾತ: ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯ, ಟೂರ್ನಿಯಿಂದಲೇ ಔಟ್! ಐಪಿಎಲ್ 2023 ಟೂರ್ನಿಯ ಆರಂಭದಲ್ಲೇ ಗಾಯದ ಸಮಸ್ಯೆ ಎದುರಾಗಿದ್ದು, ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಮುಂಬೈ: ಐಪಿಎಲ್ 2023 ಟೂರ್ನಿಯ ಆರಂಭದಲ್ಲೇ ಗಾಯದ ಸಮಸ್ಯೆ ಎದುರಾಗಿದ್ದು, ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.ಹೌದು.. ಗುಜರಾತ್ ಟೈಟನ್ಸ್ (ಜಿಟಿ) ಬ್ಯಾಟರ್ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಗುಜರಾತ್‌ ತಂಡ, ‘ನಾವು ಈ ವಿಷಯ ತಿಳಸಲು ವಿಷಾದಿಸುತ್ತೇವೆ. ಕೇನ್ ವಿಲಿಯಮ್ಸನ್ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಈ ಟೂರ್ನಿಯಲ್ಲಿ ಅವರು ಆಡುತ್ತಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಮತ್ತೆ ತಂಡಕ್ಕೆ ಮರಳಲಿ ಎಂದು ಆಶಿಸುತ್ತೇವೆ’ ಎಂದು ಹೇಳಿದೆ. , 2023, . . ../SVLu73SNpl32 ವರ್ಷದ ವಿಲಿಯಮ್ಸನ್‌ ಅವರು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧದ ಪಂದ್ಯದ ವೇಳೆ, ಬೌಂಡರಿ ಲೈನ್‌ ಬಳಿ ಕ್ಯಾಚ್ ಹಿಡಿಯುವಾಗ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಈ ಪಂದ್ಯದಲ್ಲಿ ವಿಲಿಯಮ್ಸನ್ ಬದಲಿಗೆ ಸಾಯಿ ಸುದರ್ಶನ್ ಅವರು ‘ಇಂಪ್ಯಾಕ್ಟ್ ಪ್ಲೇಯರ್’ ಆಗಿ ಆಡಿದ್ದರು.