2024: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 7 ವಿಕೆಟ್‌ಗಳ ಜಯ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ನ 22ನೇ ಪಂದ್ಯದಲ್ಲಿ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಲಖನೌ: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ನ 22ನೇ ಪಂದ್ಯದಲ್ಲಿ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಕಳೆದ ಎರಡು ಪಂದ್ಯಗಳಲ್ಲಿ ಸೋತಿದ್ದ ಚೆನ್ನೈ, ಇದೀಗ ಗೆಲುವಿನ ಲಯಕ್ಕೆ ಮರಳಿದೆ.ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 137 ರನ್‌ ಗಳಿಸಿತು.ಗೆಲುವಿಗೆ 138 ರನ್ ಗಳ ಗುರಿ ಬೆನ್ನತ್ತಿದ ಚೆನ್ನೈ, ರವೀಂದ್ರ ಜಡೇಜಾ (18ಕ್ಕೆ 3) ಅವರ ಸ್ಪಿನ್‌ ಮೋಡಿ ಹಾಗೂ ಋತುರಾಜ್‌ ಗಾಯಕ್ವಾಡ್‌ (67*) ಅವರ ಅರ್ಧಶತಕದ ನೆರವಿನಿಂದ 17.4 ಓವರ್‌ಗಳಲ್ಲಿ 141 ರನ್ ಗಳಿಸುವ ಮೂಲಕ 7 ವಿಕೆಟ್‌ಗಳ ಜಯ ಸಾಧಿಸಿತು.ಚೆನ್ನೈ ಪರ ನಾಯಕ ಋತುರಾಜ್‌ ಗಾಯಕ್ವಾಡ್‌ ಆಕರ್ಷಕ ಅರ್ಧಶತಕ ಸಿಡಿಸಿದರು. ಎದುರಿಸಿದ 58 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ ಅಜೇಯ 67 ರನ್‌ ಗಳಿಸಿದರು. ಇವರಿಗೆ ನೆರವು ನೀಡಿದ ಡ್ಯಾರಿಲ್‌ ಮಿಚೆಲ್‌ 25 ರನ್‌ ಹಾಗೂ ಶಿವಂ ದುಬೆ 28 ರನ್‌ ಗಳಿಸಿ ತಂಡದ ಗೆಲುವಿಗೆ ನೆರವಾದರು.ಇನ್ನು ಅನಿರೀಕ್ಷಿತವಾಗಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಕೋಲ್ಕತ್ತಾ, ಸುನೀಲ್ ನರೇನ್‌ (27), ಅಂಗಕೃಷ್‌ ರಘುವಂಶಿ (24) ಹಾಗೂ ಶ್ರೇಯಸ್‌ ಅಯ್ಯರ್‌ (34) ಸಿಕ್ಕ ಉತ್ತಮ ಆರಂಭದಲ್ಲಿ ದೊಡ್ಡ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲರಾದರು. ಇನ್ನುಳಿದ ಬ್ಯಾಟರ್‌ಗಳು ಕನಿಷ್ಠ ವೈಯಕ್ತಿಕ 15 ರನ್‌ ಗಳಿಸಲು ಕೂಡ ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಕೆಕೆಆರ್‌ 20 ಓವರ್‌ಗಳಿಗೆ 9 ವಿಕೆಟ್‌ ನಷ್ಟಕ್ಕೆ 137 ರನ್‌ ಗಳಿಸಿತು.