ಟಿ20 ವಿಶ್ವಕಪ್: ಪಾಕ್‌ ವಿರುದ್ಧ ಟಾಸ್‌ ಗೆದ್ದ ಭಾರತ, ಬೌಲಿಂಗ್ ಆಯ್ಕೆ ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಸೂಪರ್ 12ರ ಗ್ರೂಪ್-2ರ ಪಂದ್ಯದಲ್ಲಿ ಭಾನುವಾರ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮೆಲ್ಬರ್ನ್: ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಸೂಪರ್ 12ರ ಗ್ರೂಪ್-2ರ ಪಂದ್ಯದಲ್ಲಿ ಭಾನುವಾರ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಭಾನುವಾರ ಮುಖಾಮುಖಿಯಾಗಲಿವೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಕಳೆದ ವರ್ಷದ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಕೈಯಲ್ಲಿ ಮೊದಲ ಬಾರಿ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.ಸರಿಯಾಗಿ ಒಂದು ವರ್ಷದ ಹಿಂದೆ ಅಂದರೆ ಅ.24, 2021 ರಂದು ಟಿ20 ವಿಶ್ವಕಪ್ ನಲ್ಲಿ ಉಭಯ ತಂಡಗಳು ಪರಸ್ಪರ ಎದುರಾಗಿದ್ದವು. ಇದೀಗ ಪಾಕ್ ವಿರುದ್ಧ ಸೇಡು ತೀರಿಸಿಕೊಳ್ಳಲು ಭಾರತಕ್ಕೆ ಅವಕಾಶ ದೊರೆತಿದೆ.