ಐಸಿಸಿ ಏಕದಿನ ವಿಶ್ವಕಪ್ 2023: ಸಚಿನ್ ದಾಖಲೆ ಮುರಿದ ಡೇವಿಡ್ ವಾರ್ನರ್, ವಿಶ್ವಕಪ್ ನಲ್ಲಿ ವೇಗದ ಸಾವಿರ ರನ್ ಪೂರೈಕೆ ಐಸಿಸಿ ಏಕದಿನ ವಿಶ್ವಕಪ್ 2023 ಕ್ರಿಕೆಟ್ ಟೂರ್ನಿಯ ಭಾರತ ತಂಡದ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ದೈತ್ಯ ಬ್ಯಾಟರ್ ಡೇವಿಡ್ ವಾರ್ನರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ 2023 ಕ್ರಿಕೆಟ್ ಟೂರ್ನಿಯ ಭಾರತ ತಂಡದ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ದೈತ್ಯ ಬ್ಯಾಟರ್ ಡೇವಿಡ್ ವಾರ್ನರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.ಹೌದು.. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಪಂದ್ಯದಲ್ಲಿ 52 ಎಸೆತಗಳಲ್ಲಿ 6 ಬೌಂಡರಿ ಸಹಿತ 41 ರನ್ ಗಳಿಸಿದ ಡೇವಿಡ್ ವಾರ್ನರ್ ತಮ್ಮ ಏಕದಿನ ವಿಶ್ವಕಪ್ ವೃತ್ತಿ ಜೀವನದಲ್ಲಿ ಸಾವಿರ ರನ್ ಗಳನ್ನು ಪೂರೈಸಿದರು. ಆ ಮೂಲಕ ಈ ಸಾಧನೆ ಮಾಡಿದ 4ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಅಂತೆಯೇ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಪರ 4ನೇ ಅತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೂ ಭಾಜನರಾದರು. ಇದನ್ನೂ ಓದಿ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಕ್ಯಾಚಿಂಗ್ ನಲ್ಲಿ ದಾಖಲೆ ಬರೆದ 'ವಿರಾಟ್ ಕೊಹ್ಲಿ' 1743 - 1085 - 1004 - 1001* - * 987 - Haydenಆಸ್ಟ್ರೇಲಿಯಾ ಪರ ವಿಶ್ವಕಪ್ ಟೂರ್ನಿಯಲ್ಲಿ ರಿಕ್ಕಿ ಪಾಂಟಿಂಗ್ 1743 ಕಲೆ ಹಾಕಿ ಅಗ್ರಸ್ಥಾನದಲ್ಲಿದ್ದು, 1085 ರನ್ ಗಳೊಂದಿಗೆ ಆ್ಯಡಂ ಗಿಲ್ ಕ್ರಿಸ್ಟ್ 2ನೇ ಸ್ಥಾನದಲ್ಲಿದ್ದಾರೆ. ಅಂತೆಯೇ 1004ರನ್ ಗಳಿಸಿರುವ ಮಾರ್ಕ್ ವಾ 3ನೇ ಸ್ಥಾನದಲ್ಲಿದ್ದಾರೆ.ಇದನ್ನೂ ಓದಿ: ಏಕದಿನ ವಿಶ್ವಕಪ್: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಚ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಮೊದಲ ವಿಕೆಟ್ ಪತನಸಚಿನ್ ದಾಖಲೆ ಮುರಿದ ಡೇವಿಡ್ ವಾರ್ನರ್ ಇನ್ನು ಈ ಪಂದ್ಯದಲ್ಲಿ ಸಾವಿರ ರನ್ ಗಳಿಸುವ ಮೂಲಕ ವಾರ್ನರ್ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೂ ಹಿಂದಿಕ್ಕಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಕಡಿಮೆ ಇನ್ನಿಂಗ್ಸ್ ನಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ಇದೀಗ ವಾರ್ನರ್ ಪಾಲಾಗಿದೆ. ಈ ದಾಖಲೆಗಾಗಿ ವಾರ್ನರ್ ಕೇವಲ 19 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದಾರೆ.ಭಾರತದ ಸಚಿನ್ ತೆಂಡೂಲ್ಕರ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ 20 ಇನ್ನಿಂಗ್ಸ್ ಗಳಲ್ಲಿ ಸಾವಿರ ರನ್ ಪೂರೈಸಿ ಈ ಪಟ್ಟಿಯಲ್ಲಿ ಜಂಟಿ 2ನೇ ಸ್ಥಾನದಲ್ಲಿದ್ದಾರೆ. ತಲಾ 21 ಇನ್ನಿಂಗ್ಸ್ ಗಳಲ್ಲಿ ಸಾವಿರ ರನ್ ಪೂರೈಸಿರುವ ವೆಸ್ಟ್ ಇಂಡೀಸ್ ತಂಡದ ವಿವಿಯನ್ ರಿಚರ್ಡ್ಸ್ ಮತ್ತು ಭಾರತದ ಸೌರವ್ ಗಂಗೂಲಿ ಜಂಟಿ 3ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್: ಭಾರತ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ! 1000 19 - * 20 - / 21 - / 22 - 22 -