ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಚಹಾ ವಿರಾಮಕ್ಕೆ ಮುನ್ನ ಭಾರತ 217 ರನ್ ಗೆ ಆಲೌಟ್ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217ರನ್ ಗಳ ಸಾಧಾರಣ ಮೊತ್ತಕ್ಕೆ ಆಲೌಟ್ ಆಗಿದೆ. ಸೌಥ್ಯಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217 ರನ್ ಗಳ ಸಾಧಾರಣ ಮೊತ್ತಕ್ಕೆ ಆಲೌಟ್ ಆಗಿದೆ.205 ರನ್ ಗಳಿಸುವಾಗ ಭಾರತ ಏಳು ವಿಕೆಟ್ ಕಳೆದುಕೊಂಡಿತ್ತು ಆ ನಂತರ ಬಲಗೈ ವೇಗಿ ಕೈಲ್ ಜೆಮಿಸನ್ ಅವರ ಆಕ್ರಮಣಕಾರಿ ಬೌಲಿಂಗ್ ಭಾರತದ ಸರ್ವಪತನಕ್ಕೆ ಕಾರಣವಾಯಿತು.ಭಾರತದ ಪರ ನಾಯಕ ವಿರಾಟ್ ಕೊಹ್ಲಿ(44) ಹಾಗೂ ಉಪನಾಯಕ ರಹಾನೆ (49) ಉತ್ತಮ ಮೊತ್ತ ಗಳಿಸಿದ್ದರುರೋಸ್ ಬೌಲ್ ನ ಸೌಥ್ಯಾಂಪ್ಟನ್ ಕ್ರೀಡಾಂಗಣದಲ್ಲಿ ನಿನ್ನೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಆರಂಭವಾಗಿರಲಿಲ್ಲ. ಇಂದು ಆರಂಭವಾದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.