2ನೇ ಏಕದಿನ ಪಂದ್ಯ: ಇಂಗ್ಲೆಂಡ್ ನಿಂದ ಭಾರತಕ್ಕೆ 247 ರನ್ ಗುರಿ ಇಂಗ್ಲೆಂಡ್ ನ ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು 49 ಓವರ್ ಗಳಲ್ಲಿ 246 ರನ್ ಗಳಿಗೆ ಕಟ್ಟಿ ಹಾಕಿದೆ. ಲಾರ್ಡ್ಸ್: ಇಂಗ್ಲೆಂಡ್ ನ ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು 49 ಓವರ್ ಗಳಲ್ಲಿ 246 ರನ್ ಗಳಿಗೆ ಕಟ್ಟಿ ಹಾಕಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲರ್ ಗಳು ಆರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರಾದ ಜೇಸನ್ ರಾಯ್ (33 ಎಸೆತಗಳಲ್ಲಿ 23 ರನ್) ಜಾನಿ ಬೈರ್ಸ್ಟೋವ್ (38 ಎಸೆತಗಳಲ್ಲಿ 38 ರನ್) ವೇಗವಾಗಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ನತ್ತ ನಡೆದರು. ನಂತರ ಮಧ್ಯ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಹಾಗೂ ಕಡೆಯ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಭಾರತದ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ. ಭಾರತದ ಪರ ಮೊಹಮ್ಮದ್ ಶಮಿ, 48 ರನ್ ನೀಡಿ 1 ವಿಕೆಟ್ ಪಡೆದರೆ, ಜಸ್ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದರು.