2ನೇ ಏಕದಿನ: ಭಾರತಕ್ಕೆ ಗೆಲ್ಲಲು 312 ರನ್ ಗಳ ಬೃಹತ್ ಗುರಿ ನೀಡಿದ ವೆಸ್ಟ್ ಇಂಡೀಸ್ ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಧವನ್ ಪಡೆಗೆ 312 ರನ್ ಗಳ ಬೃಹತ್ ಗುರಿ ನೀಡಿದೆ. ಕ್ವೀನ್ಸ್ ಪಾರ್ಕ್ ಓವಲ್: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಧವನ್ ಪಡೆಗೆ 312 ರನ್ ಗಳ ಬೃಹತ್ ಗುರಿ ನೀಡಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311ರನ್ ಗಳಿಸಿದೆ. ವಿಂಡೀಸ್ ಪರ ಆರಂಭಿಕ ಆಟಗಾರ ಶಾಯ್ ಹೋಪ್ 11 ರನ್ ಗಳಿಸಿ ತಂಡದ ಬೃಹತ್ ಮೊತ್ತದಲ್ಲಿ ಮಹತ್ವ ಪಾತ್ರವಹಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಮೇಯರ್ಸ್ 39ರನ್ ಗಳಿಸಿದರೆ, ಬಳಿಕ ಕ್ರೀಸ್ ಗೆ ಆಗಮಿಸಿದ ಬ್ರೂಕ್ಸ್ 36ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದೇ ವೇಳೆ ಕಿಂಗ್ಸ್ ಶೂನ್ಯಕ್ಕೆ ಔಟಾದಾಗ ಭಾರತ ಮೇಲುಗೈ ಸಾಧಿಸಿತ್ತು.ಇದನ್ನೂ ಓದಿ: ಭಾರತ ವಿಂಡೀಸ್: ಸರಣಿ ಗೆಲುವಿನತ್ತ ಟೀಂ ಇಂಡಿಯಾ ಚಿತ್ತ, ದಾಖಲೆ ಹೊಸ್ತಿಲಲ್ಲಿ ಭಾರತ ತಂಡಆದರೆ ಈ ಹಂತದಲ್ಲಿ ಹೋಪ್ ಜೊತೆಗೂಡಿದ ನಾಯಕ ಪೂರನ್ (74 ರನ್) ವಿಂಡೀಸ್ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ಅಂತಿಮವಾಗಿ ವಿಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311ರನ್ ಗಳಿಸಿ, ಭಾರತಕ್ಕೆ ಗೆಲ್ಲಲು 312 ರನ್ ಗುರಿ ನೀಡಿದೆ.ಭಾರತದ ಪರ ಶಾರ್ದೂಲ್ ಠಾಕೂರ್ ಮೂರು ವಿಕೆಟ್ ಪಡೆದರೆ, ಹೂಡಾ, ಅಕ್ಸರ್ ಪಟೇಲ್ ಮತ್ತು ಚಹಲ್ ತಲಾ ಒಂದು ವಿಕೆಟ್ ಪಡೆದರು.