2024 : ಫೈನಲ್ ಪಂದ್ಯಕ್ಕೆ ಒಂದೇ ಮೆಟ್ಟಿಲು, ಬಲಿಷ್ಠ ಮುಂಬೈ ವಿರುದ್ಧ ಬ್ಯಾಟಿಂಗ್ ಆಯ್ಕೆ, 3 ವಿಕೆಟ್ ಪತನ! ಡಬ್ಲ್ಯುಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಮತ್ತು ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಸ್ಮೃತಿ ಮಂದಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ನವದೆಹಲಿ: ಡಬ್ಲ್ಯುಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಮತ್ತು ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಸ್ಮೃತಿ ಮಂದಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ನವದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್ ಸಿಬಿ ತಂಡ ಬ್ಯಾಟಿಂಗ್ ಆರಂಭಿಸಿದ್ದು ಸ್ಮೃತಿ ಮಂದಾನ ಹಾಗೂ ಸೋಫಿ ಡಿವೈನ್ ಬ್ಯಾಟಿಂಗ್ ಆರಂಭಿಸಿದ್ದರು. ಆದರೆ 23 ರನ್ ಗಳಿಗೆ ಆರ್ ಸಿಬಿ 3 ವಿಕೆಟ್ ಕಳೆದುಕೊಂಡಿದೆ. ಸ್ಮೃತಿ ಮಂದಾನ ಹಾಗೂ ಸೋಫಿ ಡಿವೈನ್ ತಲಾ 10 ರನ್ ಬಾರಿಸಿ ಔಟಾಗಿದ್ದಾರೆ.ಸೋಫಿ ಮೊಲಿನೆಕ್ಸ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್,ಜಾರ್ಜಿಯಾ ವೇರ್ಹ್ಯಾಮ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನ, ಶ್ರದ್ದಾ ಪೋಖರ್ಕರ್, ರೇಣುಕಾ ಸಿಂಗ್ ಆಡುವ 11ರ ಬಳಗದಲ್ಲಿದ್ದಾರೆ.ಟೂರ್ನಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ ಲಗ್ಗೆ ಇಟ್ಟಿದೆ.