2024: ಭರ್ಜರಿ ಬ್ಯಾಟಿಂಗ್, ಚೆನ್ನೈ ಗೆಲ್ಲಲು 219 ರನ್ ಬೃಹತ್ ಗುರಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ಗೆ ಗೆಲ್ಲಲು 219ರನ್ ಗಳ ಬೃಹತ್ ಗುರಿ ನೀಡಿದೆ. ಬೆಂಗಳೂರು: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ಗೆ ಗೆಲ್ಲಲು 219ರನ್ ಗಳ ಬೃಹತ್ ಗುರಿ ನೀಡಿದೆ.ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡ ನಿಗಧಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 219ರನ್ ಗಳ ಬೃಹತ್ ಗುರಿ ನೀಡಿದೆ.ಆರ್ ಸಿಬಿ ಪರ ವಿರಾಟ್ ಕೊಹ್ಲಿ 47 ರನ್ ಗಳಿಸಿ ಅರ್ಧಶತಕ ಮಿಸ್ ಮಾಡಿಕೊಂಡರೆ, ನಾಯಕ್ ಫಾಪ್ ಡುಪ್ಲೆಸಿಸ್ 39 ಎಸೆತಗಳಲ್ಲಿ 54 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ರಜತ್ ಪಾಟಿದಾರ್ 23 ಎಸೆತಗಳಲ್ಲಿ 41 ರನ್ ಸಿಡಿಸಿದರು. ಕೆಮರಾನ್ ಗ್ರೀನ್ 17 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 3 ಬೌಂಡರಿಗಳ ನೆರವಿನಿಂದ ಅಜೇಯ 38 ರನ್ ಸಿಡಿಸಿದರು.ಅಂತಿಮವಾಗಿ ಆರ್ ಸಿಬಿ ತಂಡ ನಿಗಧಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿ ಚೆನ್ನೈಗೆ ಗೆಲ್ಲಲು 219ರನ್ ಗಳ ಬೃಹತ್ ಗುರಿ ನೀಡಿದೆ.𝘾𝙇𝙐𝘽𝘽𝙀𝘿! - 41 23 👏👏 @ @ 💻📱# | # ../wlrEQSWIMsಅಂದಹಾಗೆ ಆರ್ ಸಿಬಿ ಪ್ಲೇ ಆಫ್ ಗೇರಲು ಈ ಪಂದ್ಯವನ್ನು ಕನಿಷ್ಟ 18 ರನ್ ಗಳ ಅಂತರದಲ್ಲಿ ಗೆಲ್ಲಲೇಬೇಕಿದೆ.