ಭಾರತ ವನಿತೆಯರ ಐತಿಹಾಸಿಕ ಗೆಲುವಿನ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದ ಆಸಿಸ್ ನಾಯಕಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಏಕೈಕ ಪಂದ್ಯದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ವನಿತೆಯರ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ಈ ಸಾಧನೆಯ ಗೆಲುವಿನ ಸಂಭ್ರಮವನ್ನು ಆಸ್ಟ್ರೇಲಿಯಾ ತಂಡದ ನಾಯಕಿ ಅಲಿಸ್ಸಾ ಹೀಲಿ ಕ್ಯಾಮೆರಾದಲ್ಲಿ ಸೆರೆ ಹಿಡಿಯುವ ಮೂಲಕ ಸ್ಮರಣೀಯವಾಗಿಸಿದ್ದಾರೆ. ಮುಂಬೈ: ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಏಕೈಕ ಪಂದ್ಯದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ವನಿತೆಯರ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ಈ ಸಾಧನೆಯ ಗೆಲುವಿನ ಸಂಭ್ರಮವನ್ನು ಆಸ್ಟ್ರೇಲಿಯಾ ತಂಡದ ನಾಯಕಿ ಅಲಿಸ್ಸಾ ಹೀಲಿ ಕ್ಯಾಮೆರಾದಲ್ಲಿ ಸೆರೆ ಹಿಡಿಯುವ ಮೂಲಕ ಸ್ಮರಣೀಯವಾಗಿಸಿದ್ದಾರೆ.ಆಸ್ಟ್ರೇಲಿಯಾ( ) ವಿರುದ್ಧದ ಏಕೈಕ ಪಂದ್ಯದ ಟೆಸ್ಟ್ ಸರಣಿಯನ್ನು 8 ವಿಕೆಟ್ಗಳಿಂದ ಗೆಲ್ಲುವ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಈ ಗೆಲುವಿನ ಸಂಭ್ರಮದಲ್ಲಿದ್ದಾಗ ಆಸೀಸ್ ನಾಯಕಿ ಅಲಿಸ್ಸಾ ಹೀಲಿ( ) ಅವರು ಅಚ್ಚರಿ ಎಂಬಂತೆ ಕ್ಯಾಮೆರಾ ಹಿಡಿದು ಮೈದಾನಕ್ಕೆ ಬಂದಿದ್ದು, ಟೀಂ ಇಂಡಿಯಾ ಆಟಗಾರ್ತಿಯರ ಫೋಟೊ ಕೂಡ ಕ್ಲಿಕ್ಕಿಸಿದ್ದಾರೆ.ಇದನ್ನೂ ಓದಿ: ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಇತಿಹಾಸ ನಿರ್ಮಿಸಿದ ಭಾರತಸೋತರೂ ಕ್ರೀಡಾಸ್ಫೂರ್ತಿ ಮೆರೆದ ಅಲಿಸ್ಸಾ ಹೀಲಿ ಇದೀಗ ಎಲ್ಲರ ಹೃದಯ ಗೆದ್ದಿದ್ದಾರೆ. ಹೀಲಿ ಕ್ಯಾಮೆರಾ ಹಿಡಿದುಕೊಂಡು ಬಂದ ವಿಡಿಯೊ( ) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. .# ../LZjwonJas1ಅಂದಹಾಗೆ ಪಂದ್ಯದ ಅಂತಿಮ ದಿನ ಭಾರತ ಮಹಿಳಾ ತಂಡಕ್ಕೆ ಗೆಲ್ಲಲು ಕೇವಲ 75 ರನ್‌ಗಳು ಬೇಕಿತ್ತು. 18.4 ಓವರ್ನಲ್ಲಿ 2 ವಿಕಟ್ನಷ್ಟಕ್ಕೆ ಈ ಮೊತ್ತವನ್ನು ಬೆನ್ನಟ್ಟಿದ ಭಾರತ ಐತಿಹಾಸಿಕ ಗೆಲುವ ದಾಖಲಿಸಿತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ಬೌಂಡರಿ ಬಾರಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು.