T20 ವಿಶ್ವಕಪ್: ಬಾಂಗ್ಲಾ ವಿರುದ್ಧ 4 ರನ್ ರೋಚಕ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಸೋಮವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 21ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ದಕ್ಷಿಣ ಆಫ್ರಿಕಾ 4 ರನ್ ಗಳ ರೋಚಕ ಗೆಲುವು ಸಾಧಿಸಿದೆ. ನ್ಯೂಯಾರ್ಕ್‌: ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಸೋಮವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 21ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ದಕ್ಷಿಣ ಆಫ್ರಿಕಾ 4 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ ಮೂರು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ 6 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ತಂಡ ಸೂಪರ್ 8 ಹಂತಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಂಡಿದೆ.ಇಂದು ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅರ್ಧಶತಕದ ಜೊತೆಯಾಟದ ನೆರವಿಂದ 6 ವಿಕೆಟ್ ನಷ್ಟಕ್ಕೆ 113 ರನ್ ಗಳ ಸಾಧರಣ ಮೊತ್ತ ಕಲೆ ಹಾಕಿತು.ಗೆಲುವಿಗೆ 114 ರನ್ ಗುರಿ ಬೆನ್ನತ್ತಿದ ಬಾಂಗ್ಲಾದೇಶ, ತೌಹಿದ್‌ ಹಾಗೂ ಮಹ್ಮದುಲ್ಲಾ ಹೋರಾಟದ ಹೊರತಾಗಿಯೂ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 109 ರನ್‌ ಗಳಿಸಲಷ್ಟೇ ಶಕ್ತವಾಯ್ತು. ಈ ಮೂಲಕ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು 4 ರನ್‌ಗಳಿಂದ ಸೋತಿತು.ದಕ್ಷಿಣ ಆಫ್ರಿಕಾ ಪರ ಮಾರಕ ಬೌಲಿಂಗ್ ಮಾಡಿದ ಅನ್ರಿಚ್ ನಾರ್ಟ್ಜೆ 4 ಓವರ್‌ಗಳಲ್ಲಿ 17 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಕಗಿಸೊ ರಬಾಡ 4 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಕೇಶವ್ ಮಹಾರಾಜ್ 4 ಓವರ್‌ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.