ಟಿ-20 ವಿಶ್ವಕಪ್: ಭಾರತವನ್ನು 133 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. ಪರ್ತ್: ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 9, ರೋಹಿತ್ ಶರ್ಮಾ 15, ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟಾಗುವುದರೊಂದಿಗೆ ಆರಂಭದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು. ನಂತರ ಬಂದ ಸೂರ್ಯಕುಮಾರ್ ಯಾದವ್ 68 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ 133 ರನ್ ಗಳಿಸಲು ನೆರವಾದರು. ಇದನ್ನೂ ಓದಿ: ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಅಕ್ಸರ್ ಪಟೇಲ್ ಬದಲು ತಂಡದಲ್ಲಿ ದೀಪಕ್ ಹೂಡಾಉಳಿದಂತೆ ದೀಪಕ್ ಹೂಡಾ ಶೂನ್ಯಕ್ಕೆ ಔಟಾದರೆ, ಹಾರ್ದಿಕ್ ಪಾಂಡ್ಯ 2, ದಿನೇಶ್ ಕಾರ್ತಿಕ್ 6, ಆರ್. ಅಶ್ವಿನ್ 7, ಭುವನೇಶ್ವರ್ ಕುಮಾರ್ 4 ರನ್ ಗಳಿಸಿದರು.