ನಾಳೆಯಿಂದ ಭಾರತ- ಬಾಂಗ್ಲಾದೇಶ ಏಕದಿನ ಸರಣಿ: ಟ್ರೋಫಿ ಅನಾವರಣಗೊಳಿಸಿದ ರೋಹಿತ್, ಲಿಟ್ಟನ್ ದಾಸ್ ಭಾರತ- ಬಾಂಗ್ಲಾದೇಶ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಟ್ರೋಫಿಯನ್ನು ಅನಾವರಣಗೊಳಿಸಲಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಬಾಂಗ್ಲಾದೇಶದ ನಾಯಕ ಲಿಟ್ಟನ್ ದಾಸ್ ಅವರು ಟ್ರೋಫಿಯನ್ನು ಅನಾವರಣಗೊಳಿಸಿದರು. ಮಿರ್ ಪುರ: ಭಾರತ- ಬಾಂಗ್ಲಾದೇಶ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಟ್ರೋಫಿಯನ್ನು ಅನಾವರಣಗೊಳಿಸಲಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಬಾಂಗ್ಲಾದೇಶದ ನಾಯಕ ಲಿಟ್ಟನ್ ದಾಸ್ ಅವರು ಟ್ರೋಫಿಯನ್ನು ಅನಾವರಣಗೊಳಿಸಿದರು.ನ್ಯೂಜಿಲೆಂಡ್ ವಿರುದ್ಧದ ಸರಣಿ ಸೋಲಿನ ಬಳಿಕ ಭಾರತ ಬಾಂಗ್ಲಾದೇಶದ ವಿರುದ್ಧ ಸೆಣಸಾಟ ನಡೆಸುತ್ತಿದ್ದು, ಈ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಿದೆ. ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕರಾಗಿ ವಾಪಸ್ಸಾಗಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಧ್ಯತೆಯಿದೆ.ಇದನ್ನೂ ಓದಿ: ಮೊಹಮ್ಮದ್ ಶಮಿಗೆ ಗಾಯ: ಬಾಂಗ್ಲಾದೇಶ ಏಕದಿನ ಸರಣಿಯಿಂದ ಹೊರಗೆ# | 3- 1st , . (: ) ../XY0j9y8qoDಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ) ಕೆಎಲ್ ರಾಹುಲ್ (ಉಪ ನಾಯಕ) ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್) ಇಶಾನ್ ಕಿಶಾನ್ (ವಿಕೆಟ್ ಕೀಪರ್) ಶಹಬಾಜ್ ಅಹ್ಮದ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮದ್ ಸಿರಾಜ್, ದೀಪಕ್ ಚಹರ್, ಕುಲದೀಪ್ ಸೇನ್ಬಾಂಗ್ಲಾದೇಶ ತಂಡ ಇಂತಿದೆ: ತಮಿಮ್ ಇಕ್ಬಾಲ್, ಲಿಟ್ಟನ್ ದಾಸ್, ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಯಾಸಿರ್ ಅಲಿ, ಮೆಹಿದಿ ಹಸನ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮ್ಮದ್, ಎಬಾಡೋತ್ ಹೊಸೈನ್, ನಸುಮ್ ಅಹ್ಮದ್, ಮಹಮ್ಮದುಲ್ಲಾ, ನಜ್ಮುಲ್ ಹೊಸೈನ್ ಶಾಂಟೋ ಮತ್ತು ನೂರುಲ್ ಹಸನ್ ಸೋಹನ್