ವಿಶ್ವಕಪ್: ಭಾರತ / ಆಸ್ಟ್ರೇಲಿಯಾ ಫೈನಲ್ ಪಂದ್ಯ ವೀಕ್ಷಿಸಲು ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್ಇಡಿ ಪರದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ - ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ರಾಜ್ಯಾದ್ಯಂತ... ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ - ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ರಾಜ್ಯಾದ್ಯಂತ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್ ಇಡಿ ಪರದೆಯಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.ಇಲಾಖೆ ನಡೆಸುವ ಹಾಸ್ಟೆಲ್‌ ವಿದ್ಯಾರ್ಥಿಗಳು, ಕ್ರೀಡಾ ಉತ್ಸಾಹಿಗಳು ಮತ್ತು ಕ್ರಿಕೆಟ್‌ ಅಭಿಮಾನಿಗಳು ಅಂತಿಮ ಪಂದ್ಯದ ಅವಿಸ್ಮರಣೀಯ ಕ್ಷಣಗಳನ್ನು ದೊಡ್ಡ ಪರದೆ ಮೇಲೆ ವೀಕ್ಷಿಸಲಿ ಎಂಬ ಉದ್ದೇಶದಿಂದ ಕ್ರೀಡಾ ಇಲಾಖೆ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್ ಇಡಿ ಪರದೆ ವ್ಯವಸ್ಥೆ ಮಾಡಿದೆ.ಇದನ್ನು ಓದಿ: 2023: ಫೈನಲ್ ಗೆ ಕೌಂಟ್ ಡೌನ್, ಸೂಪರ್ ಸಂಡೇಯಲ್ಲಿ ಹೊಸ ಇತಿಹಾಸ ಸೃಷ್ಟಿಗೆ ಭಾರತ ಸಜ್ಜು!ಈ ಸಂಬಂಧ ಕ್ರೀಡಾ ಇಲಾಖೆಯ ಆಯುಕ್ತರು, ಎಲ್ಲಾ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದು, ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ದೊಡ್ಡ ಎಲ್ ಇಡಿ ಪರದೆ, ಅದಕ್ಕೆ ಬೇಕಾದ ಸೌಂಡ್‌ ವ್ಯವಸ್ಥೆ, ಆಸನಗಳ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ.ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ ಟಿ ಅವರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ.ಆದರೆ, ಕೊನೆಯ ಕ್ಷಣದಲ್ಲಿ ಎಲ್‌ಇಡಿ ಪರದೆ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿರುವುದು ರಾಜ್ಯದ ಹಲವು ಕಡೆ ದೊಡ ಸವಾಲಾಗಿ ಪರಿಣಮಿಸಿದೆ ಎಂದು ಇಲಾಖೆಯ ಮೂಲಗಳು ಬಹಿರಂಗಪಡಿಸಿವೆ.