ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿ ಪೊಲೀಸರ ವಶಕ್ಕೆ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆ ಅಭಿಮಾನಿಯೊಬ್ಬ ಹೈ ಸೆಕ್ಯೂರಿಟಿ ಮಧ್ಯೆಯೂ ಮೈದಾನದೊಳಗೆ ಒಳಗಡೆ ನುಗ್ಗಿ ಕೊಹ್ಲಿ ಕಾಲು ಹಿಡಿದು ಹುಚ್ಚಾಟ ನಡೆಸಿದ್ದ.ಕೊಹ್ಲಿ ಬರುವುದನ್ನೇ ಕಾಯುತ್ತಿದ್ದ ಅಭಿಮಾನಿ ಎಲ್ಲಾ ರೂಲ್ಸ್‌ಗಳನ್ನು ಮುರಿದು ಕ್ರೀಸ್ ಒಳಗಡೆ ನುಗ್ಗಿ ಏಕಾಏಕಿ ಕೊಹ್ಲಿ ಕಾಲಿಗೆ ಬಿದ್ದು ಬಳಿಕ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಘಟನೆ ಬಳಿಕ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಹ್ಲಿ ನೋಡುವ ಸಲುವಾಗಿ ರಾಯಚೂರಿನಿಂದ ರೈಲಿನಲ್ಲಿ ಬಂದಿದ್ದು, 3000 ರೂಪಾಯಿಗೆ ಟಿಕೆಟ್ ಖರೀದಿಸಿದ್ದ ಎಂದು ತಿಳಿದುಬಂದಿದೆ.ಇದೀಗ ಈತನ ವಿರುದ್ಧ ಐಪಿಸಿ ಸೆಕ್ಷನ್ 447, ಐಪಿಸಿ ಸೆಕ್ಷನ್ 290 ಮತ್ತು ಐಪಿಸಿ ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ, ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ