ಐಪಿಎಲ್‌ 2020: ನಾಳೆ ಚೆನ್ನೈ ಸೂಪರ್‌ ಕಿಂಗ್ಸ್- ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್‌ಗಳ ಸೋಲು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ, ನಾಳೆ (ಶನಿವಾರ) ಸಂಜೆ 7:30ಕ್ಕೆ (ಭಾರತೀಯ ಕಾಲಮಾನ) ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಲು ಸಜ್ಜಾಗಿದೆ. ದುಬೈ: ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್‌ಗಳ ಸೋಲು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ, ನಾಳೆ(ಶನಿವಾರ) ಸಂಜೆ 7:30ಕ್ಕೆ (ಭಾರತೀಯ ಕಾಲಮಾನ) ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಲು ಸಜ್ಜಾಗಿದೆ. ಬೆಂಗಳೂರು ಹಾಗೂ ಚೆನ್ನೈ ಎರಡೂ ದಕ್ಷಿಣ ಭಾರತದ ಎರಡು ಬಲಿಷ್ಠ ತಂಡಗಳಾಗಿವೆ. ಪ್ರಸಕ್ತ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ ಐದು ಪಂದ್ಯಗಳಿಂದ ಮೂರರಲ್ಲಿ ಜಯ ದಾಖಲಿಸಿದೆ. ಇನ್ನೂ ಚೆನ್ನೈ ಸೂಪರ್‌ ಕಿಂಗ್ಸ್ ಆಡಿದ ಆರು ಪಂದ್ಯಗಳಿಂದ ಎರಡರಲ್ಲಿ ಮಾತ್ರ ಜಯ ಗಳಿಸಿದೆ. ಐಪಿಎಲ್‌ ಇತಿಹಾಸದಲ್ಲಿಯೇ ಆರ್‌ಸಿಬಿ ಹಾಗೂ ಸಿಎಸ್‌ಕೆ ಒಟ್ಟು 23 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 15 ಪಂದ್ಯಗಳಲ್ಲಿ ಚೆನ್ನೈ ಫ್ರಾಂಚೈಸಿ ಗೆಲ್ಲುವ ಮೂಲಕ ಆರ್‌ಸಿಬಿ ಎದುರು ಪ್ರಾಬಲ್ಯ ಸಾಧಿಸಿದೆ. ಆದರೆ, ಈ ಬಾರಿ ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್ ಕಳಪೆ ಲಯವನ್ನು ಮುಂದುವರಿಸುತ್ತಿದೆ. ಇದು ಆರ್‌ಸಿಬಿಗೆ ಸ್ವಲ್ಪ ಮುನ್ನಡೆಯಾಗಬಹುದು.