ಐಪಿಎಲ್ 2020: ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಜಸ್ಥಾನ್ ರಾಯಲ್ಸ್ ಮುಖಾಮುಖಿ ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್‌ ಓವರ್‌ನಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಹದಿಮೂರನೇ ಅವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 15ನೇ ಪಂದ್ಯದಲ್ಲಿ ನಾಳೆ ಅಬುಧಾಬಿಯ ಶೇಖ್‌ ಜಾಹೇದ್‌ ಕ್ರೀಡಾಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ. ನವದೆಹಲಿ: ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್‌ ಓವರ್‌ನಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಹದಿಮೂರನೇ ಅವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 15ನೇ ಪಂದ್ಯದಲ್ಲಿ ನಾಳೆ ಅಬುಧಾಬಿಯ ಶೇಖ್‌ ಜಾಹೇದ್‌ ಕ್ರೀಡಾಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ.ಆರ್‌ಸಿಬಿ ಹಾಗೂ ರಾಜಸ್ಥಾನ್‌ ಹಿಂದಿನ ವಿಭಿನ್ನ ಫಲಿತಾಂಶಗಳೊಂದಿಗೆ ಮುಖಾಮುಖಿಯಾಗುತ್ತಿವೆ. ಅದ್ಭುತ ನಾಯಕರಾಗಿ ಹಾಗೂ ಆಟಗಾರರಾಗಿ ವಿರಾಟ್‌ ಕೊಹ್ಲಿ ಹಾಗೂ ಸ್ಟೀವನ್‌ ಸ್ಮಿತ್‌ ಮೊದಲ ಬಾರಿ ಐಪಿಎಲ್‌ ಟೂರ್ನಿಯಲ್ಲಿ ಎದುರಾಗುತ್ತಿದ್ದಾರೆ. ಈ ರೋಚಕ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ಕಳೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಹೊರತಾಗಿಯೂ ಸೂಪರ್‌ ಓವರ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಬೇಕಾಗಿತ್ತು. ಆರೋನ್‌ ಫಿಂಚ್‌, ದೇವದತ್‌ ಪಡಿಕ್ಕಲ್‌ ಹಾಗೂ ಎಬಿ ಡಿವಿಲಿಯರ್ಸ್ ಈ ಮೂರು ಬ್ಯಾಟ್ಸ್‌ಮನ್‌ಗಳು ಅರ್ಧಶತಕ ಸಿಡಿಸಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇದು ತಂಡಕ್ಕೆ ಪ್ಲಸ್‌ ಪಾಯಿಂಟ್‌ ಆಗಲಿದೆ. ಆದರೆ, ತಂಡದಲ್ಲಿ ಬೌಲಿಂಗ್‌ ಹಾಗೂ ಫೀಲ್ಡಿಂಗ್‌ನಲ್ಲಿ ಸಮಸ್ಯೆ ಇದೆ. ಕಳೆದ ಪಂದ್ಯವಾಡಿದ ಆಟಗಾರರನ್ನೇ ಬದಲಾವಣೆ ಇಲ್ಲದೆ ಆರ್‌ಸಿಬಿ ಕಣಕ್ಕೆ ಇಳಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.