ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ 2024: ಭಾರತದ ವಿರುದ್ದ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಭಾರತ ತಂಡದ ವಿರುದ್ಧದ ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಬೆನೊನಿ: ಭಾರತ ತಂಡದ ವಿರುದ್ಧದ ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಉದಯ್ ಸಹರಣ್ ನೇತೃತ್ವದ ಭಾರತ ತಂಡ ತಾನಾಡಿರುವ ಎಲ್ಲ ಪಂದ್ಯಗಳಲ್ಲೂ ಗೆದ್ದು ಅಜೇಯವಾಗಿ ಫೈನಲ್ ತಲುಪಿದ್ದು, ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಅಂತೆಯೇ ಸೆಮಿಫೈನಲ್ ನಲ್ಲಿ ಪ್ರಬಲ ಪಾಕಿಸ್ತಾನ ತಂಡವನ್ನು ವಿರೋಚಿತವಾಗಿ ಮಣಿಸಿರುವ ಆಸ್ಟ್ರೇಲಿಯಾ ತಂಡ ಪ್ರಶಸ್ತಿ ಗೆಲ್ಲುವ ಹಾಟ್ ಫೇವರಿಟ್ ಆಗಿದೆ.ಇದನ್ನೂ ಓದಿ: ಇಂಗ್ಲೆಂಡ್ ವಿರುದ್ದ ಅಂತಿಮ 3 ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ: ಕೊಹ್ಲಿ ಸರಣಿಯಿಂದಲೇ ಔಟ್, ರಾಹುಲ್, ಜಡೇಜಾಗೆ ಸ್ಥಾನತಂಡಗಳು ಇಂತಿವೆ. ಭಾರತ: ಆದರ್ಶ್ ಸಿಂಗ್, ಅರ್ಶಿನ್ ಕುಲಕರ್ಣಿ, ಮುಶೀರ್ ಖಾನ್, ಉದಯ್ ಸಹರನ್ (ನಾಯಕ), ಪ್ರಿಯಾಂಶು ಮೊಲಿಯಾ, ಸಚಿನ್ ದಾಸ್, ಅರವೆಲ್ಲಿ ಅವನೀಶ್ (ವಿಕೆಟ್ ಕೀಪರ್), ಮುರುಗನ್ ಅಭಿಷೇಕ್, ರಾಜ್ ಲಿಂಬಾನಿ, ನಮನ್ ತಿವಾರಿ, ಸೌಮಿ ಪಾಂಡೆ #U19WorldCup . ://./RytU4cGJLu# | # | # ../8qSttXgLusಆಸ್ಟ್ರೇಲಿಯಾ: ಹ್ಯಾರಿ ಡಿಕ್ಸನ್, ಸ್ಯಾಮ್ ಕಾನ್ಸ್ಟಾಸ್, ಹಗ್ ವೀಬ್ಜೆನ್ (ನಾಯಕ), ಹರ್ಜಸ್ ಸಿಂಗ್, ರಯಾನ್ ಹಿಕ್ಸ್ (ವಿಕೆಟ್ ಕೀಪರ್), ಆಲಿವರ್ ಪೀಕ್, ಚಾರ್ಲಿ ಆಂಡರ್ಸನ್, ರಾಫ್ ಮ್ಯಾಕ್‌ಮಿಲನ್, ಟಾಮ್ ಸ್ಟ್ರಾಕರ್, ಮಾಹ್ಲಿ ಬಿಯರ್ಡ್‌ಮ್ಯಾನ್, ಕ್ಯಾಲಮ್ ವಿಡ್ಲರ್